ಬಾಗಲಕೋಟೆ: ರೈಲ್ವೆ ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಇಲ್ಲಿನ ಮುಗಳೊಳ್ಳಿ ಎಲ್ ಟಿ 2 ಗ್ರಾಮದ ಬಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ವಿಜಯಪುರ ಜಿಲ್ಲೆಯ ನಿಡಗುಂದಿಯ ರುದ್ರೇಶ್ (42) ಮೃತ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಎತ್ತರದಲ್ಲಿದ್ದ ಮಣ್ಣು ಕುಸಿದು ದುರಂತ ಸಂಭವಿಸಿದೆ. ಬಾಗಲಕೋಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
TAGGED:ಮಣ್ಣು ಕುಸಿತ