HomeLatest Newsರೈಲ್ವೆ ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಸಾವು; ಇಬ್ಬರ ಸ್ಥಿತಿ ಗಂಭೀರ

ರೈಲ್ವೆ ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಓರ್ವ ಸಾವು; ಇಬ್ಬರ ಸ್ಥಿತಿ ಗಂಭೀರ

ಬಾಗಲಕೋಟೆ: ರೈಲ್ವೆ ಸೇತುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಇಲ್ಲಿನ ಮುಗಳೊಳ್ಳಿ ಎಲ್ ಟಿ 2 ಗ್ರಾಮದ ಬಳಿ ರೈಲ್ವೆ ಬ್ರಿಡ್ಜ್ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ವಿಜಯಪುರ ಜಿಲ್ಲೆಯ ನಿಡಗುಂದಿಯ ರುದ್ರೇಶ್ (42) ಮೃತ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಎತ್ತರದಲ್ಲಿದ್ದ ಮಣ್ಣು ಕುಸಿದು ದುರಂತ ಸಂಭವಿಸಿದೆ. ಬಾಗಲಕೋಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular