HomeKarnatakaಗುಡ್ಡ ಕುಸಿತದಿಂದ ರೈಲು ಸಂಚಾರ ಬಂದ್: ಪರೀಕ್ಷೆಗೆ ಬರಬೇಕಿದ್ದ ಕಾನ್ಸ್ ಟೇಬಲ್ ಹುದ್ದೆ ಅಭ್ಯರ್ಥಿಗಳಿಗೆ ತಟ್ಟಿದ...

ಗುಡ್ಡ ಕುಸಿತದಿಂದ ರೈಲು ಸಂಚಾರ ಬಂದ್: ಪರೀಕ್ಷೆಗೆ ಬರಬೇಕಿದ್ದ ಕಾನ್ಸ್ ಟೇಬಲ್ ಹುದ್ದೆ ಅಭ್ಯರ್ಥಿಗಳಿಗೆ ತಟ್ಟಿದ ಬಿಸಿ; ರೈಲು ನಿಲ್ದಾಣದಲ್ಲಿ ಪರದಾಟ

ಹಾಸನ: ರಾಜ್ಯದಲ್ಲಿ ಇಂದು ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಪರೀಕ್ಷೆ ನಡೆಯುತ್ತಿದ್ದು, ಭಾರಿ ಮಳೆ, ಗುಡ್ಡ ಕುಸಿತದ ಪರಿಣಾಮ ಹಲವೆಡೆ ರೈಲು ಸಂಚಾರ ಸ್ಥಗಿತಗೊಂಡಿದೆ. ಇದರಿಂದಾಗಿ ಪರೀಕ್ಷೆಗೆ ಹಾಜರಾಗಬೇಕಾದ ಅಭ್ಯರ್ಥಿಗಳಿಗೆ ರೈಲು ಸಂಚಾರವಿಲ್ಲದೇ ಸಂಕಷ್ಟ ಎದುರಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಧಾರಾಕಾರ ಮಳೆಯಿಂದಾಗಿ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಇದರಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ರೈಲಿನಲ್ಲಿ ಕಾನ್ಸ್‌ಟೇಬಲ್‌ ಪರೀಕ್ಷೆಗೆ ತೆರಳುತ್ತಿದ್ದ ಪರೀಕ್ಷಾರ್ಥಿಗಳು ಪರದಾಡುತ್ತಿದ್ದಾರೆ. ಅಲ್ಲದೇ ತಡರಾತ್ರಿ ಈ ಘಟನೆ ನಡೆದಿದ್ದು, ಪ್ರಯಾಣಕ್ಕೆ ಪರ್ಯಾಯ ಮಾರ್ಗ ಹುಡುಕಲು ಪ್ರಯಾಣಿಕರು ಪರದಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಕಲೇಶಪುರದ ಯಡಕುಮಾರಿ – ಶಿರವಾಗಿಲು ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಎಲ್ಲಾ ರೈಲುಗಳ ಸಂಚಾರ ಬಂದ್ ಆಗಿದೆ. ಸುಬ್ರಮಣ್ಯ ರೈಲ್ವೆ ನಿಲ್ದಾಣದಲ್ಲಿ ರೈಲುಗಳನ್ನು ನಿಲ್ಲಿಸಲಾಗಿದೆ. ಘಟನಾ ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇದರಿಂದಾಗಿ ರೈಲ್ವೆ ನಿಲ್ದಾಣದಲ್ಲಿ ಸಿಲುಕಿರುವ ಪರೀಕ್ಷಾರ್ಥಿಗಳು ಪರೀಕ್ಷೆಗೆ ಹಾಜರಾಗಲು ತೊಂದರೆಯಾಗುತ್ತಿದೆ.

ಇನ್ನೊಂದೆಡೆ ರೈಲಿನಲ್ಲಿದ್ದ ಪರೀಕ್ಷಾರ್ಥಿಗಳು ಹಾಗೂ ಪ್ರಯಾಣಿಕರಿಗೆ ರೈಲ್ವೇ ಇಲಾಖೆ ಹಣ ಹಿಂದಿರುಗಿಸಿ ಬಸ್ ವ್ಯವಸ್ಥೆ ಕಲ್ಪಿಸುತ್ತಿದೆ. ರೈಲು ಬಂದ್‌ನಿಂದ ಬಸ್ ನಿಲ್ದಾಣ ಹಾಗೂ ರೈಲು ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿದೆ.

ಬೆಂಗಳೂರು-ಮುರಡೇಶ್ವರ, ಬೆಂಗಳೂರು-ಕೋಜಿಕೋಡ್, ವಿಜಯಪುರ-ಮಂಗಳೂರು ರೈಲುಗಳು ಹಾಸನದಲ್ಲಿ ನಿಲುಗಡೆ.
ಬೆಂಗಳೂರು-ಕಾರವಾರ ಎಕ್ಸ್‌ಪ್ರೆಸ್ ರೈಲು ಸಕಲೇಶಪುರದಲ್ಲಿ ನಿಲುಗಡೆ.
ಮುರಡೇಶ್ವರ-ಬೆಂಗಳೂರು, ಮಂಗಳೂರು-ವಿಜಯಪುರ ರೈಲುಗಳು ಸುಬ್ರಹ್ಮಣ್ಯದಲ್ಲಿ ನಿಲುಗಡೆ.
ಕೋಜಿಕೋಡ್ ಬೆಂಗಳೂರು ರೈಲು ಪುತ್ತೂರಿನಲ್ಲಿ ನಿಲುಗಡೆ. ಪ್ರಯಾಣಿಕರಿಗೆ ಈ ರೈಲು ಸ್ಥಗಿತಗೊಂಡಿರುವ ಬಗ್ಗೆ ರೈಲ್ವೆ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular