ಸಂಜೋತಾ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ‘ಲಂಗೋಟಿ ಮ್ಯಾನ್’ ಚಿತ್ರದ ಟ್ರೈಲರ್ ಇತ್ತೀಚಿಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಭರ್ಜರಿ ಸೌಂಡ್ ಮಾಡಿದ್ದು, ನಾಳೆ ತೆರೆ ಮೇಲೆ ಬರಲು ಸಜ್ಜಾಗಿದೆ. ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಕುತೂಹಲ ಕೆರಳಿಸಿದ್ದ ಈ ಸಿನಿಮಾ ವೀಕ್ಷಿಸಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.
ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆಕಾಶ್ ರಾಂಬೊ ನಾಯಕ ನಟನಾಗಿ ಅಭಿನಯಿಸಿದ್ದು, ಸ್ನೇಹಾ ಖುಷಿ, ಸಂಹಿತಾ ವಿನ್ಯಾ, ಧೀರೇಂದ್ರ ಎಸ್, ಹುಲಿ ಕಾರ್ತಿಕ್, ಗಿಲ್ಲಿ ನಟ , ಸಾಯಿ ಪವನಕುಮಾರ್ ಎಂ, ಪಾಲ್ಟಿ ಗೋವಿಂದ್, ಮಹಾಲಕ್ಷ್ಮಿ ವಿ ಉಳಿದ ಪಾತ್ರವರ್ಗದಲ್ಲಿದ್ದಾರೆ. ತನು ಟಾಕೀಸ್ ಸಂಸ್ಥೆ ನಿರ್ಮಾಣ ಮಾಡಿದ್ದು, ಮನು, ಸ್ವರಾಜ್ ಪತ್ರಿಮಠ ಸಂಕಲನ, ರವಿವರ್ಮ ಛಾಯಾಗ್ರಹಣ, ಸುಮೇದ್ ಕೆ ಸಂಗೀತ ನಿರ್ದೇಶನವಿದೆ.