HomeEntertainmentನಾಳೆ ತೆರೆ ಕಾಣಲಿದೆ 'ಲಂಗೋಟಿ ಮ್ಯಾನ್'

ನಾಳೆ ತೆರೆ ಕಾಣಲಿದೆ ‘ಲಂಗೋಟಿ ಮ್ಯಾನ್’

ಸಂಜೋತಾ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ ‘ಲಂಗೋಟಿ ಮ್ಯಾನ್’ ಚಿತ್ರದ ಟ್ರೈಲರ್ ಇತ್ತೀಚಿಗಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿ ಭರ್ಜರಿ ಸೌಂಡ್ ಮಾಡಿದ್ದು, ನಾಳೆ ತೆರೆ ಮೇಲೆ ಬರಲು ಸಜ್ಜಾಗಿದೆ. ತನ್ನ ಶೀರ್ಷಿಕೆಯಿಂದಲೇ ಸಾಕಷ್ಟು ಕುತೂಹಲ ಕೆರಳಿಸಿದ್ದ ಈ ಸಿನಿಮಾ ವೀಕ್ಷಿಸಲು ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಆಕಾಶ್ ರಾಂಬೊ ನಾಯಕ ನಟನಾಗಿ ಅಭಿನಯಿಸಿದ್ದು, ಸ್ನೇಹಾ ಖುಷಿ, ಸಂಹಿತಾ ವಿನ್ಯಾ, ಧೀರೇಂದ್ರ ಎಸ್, ಹುಲಿ ಕಾರ್ತಿಕ್, ಗಿಲ್ಲಿ ನಟ , ಸಾಯಿ ಪವನಕುಮಾರ್ ಎಂ, ಪಾಲ್ಟಿ ಗೋವಿಂದ್, ಮಹಾಲಕ್ಷ್ಮಿ ವಿ ಉಳಿದ ಪಾತ್ರವರ್ಗದಲ್ಲಿದ್ದಾರೆ. ತನು ಟಾಕೀಸ್ ಸಂಸ್ಥೆ ನಿರ್ಮಾಣ ಮಾಡಿದ್ದು, ಮನು, ಸ್ವರಾಜ್ ಪತ್ರಿಮಠ ಸಂಕಲನ,  ರವಿವರ್ಮ ಛಾಯಾಗ್ರಹಣ, ಸುಮೇದ್ ಕೆ ಸಂಗೀತ ನಿರ್ದೇಶನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular