HomeIndiaಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ಇಂಗ್ಲಿಷ್ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲೂ ಕೇಂದ್ರ ನೇಮಕಾತಿ ಪರೀಕ್ಷೆ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿ ಸುದ್ದಿ: ಇಂಗ್ಲಿಷ್ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲೂ ಕೇಂದ್ರ ನೇಮಕಾತಿ ಪರೀಕ್ಷೆ

ನವದೆಹಲಿ: ಭಾಷೆ ಸಮಸ್ಯೆಯಿಂದ ಯುವಕರು ಉದ್ಯೋಗ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ಮಹತ್ವದ ತೀರ್ಮಾನ ಕೈಗೊಂಡಿದೆ.

ಇಂಗ್ಲಿಷ್, ಹಿಂದಿ, ಅಸ್ಸಾಮಿ, ಬಂಗಾಳಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ಒಡಿಯಾ, ತೆಲುಗು, ಉರ್ದು, ತಮಿಳು, ಪಂಜಾಬಿ, ಮಣಿಪುರಿ, ಕೊಂಕಣಿ ಭಾಷೆಗಳಲ್ಲಿಯೂ ನೇಮಕಾತಿ ಪರೀಕ್ಷೆ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆಗಳು ಮತ್ತು ಪಿಂಚಣಿ ಸಚಿವಾಲಯಕ್ಕೆ ಸಂಬಂಧಿಸಿದ 14ನೇ ಹಿಂದಿ ಸಲಹಾ ಸಮಿತಿ ಸಭೆಯನ್ನುದ್ದೇಶಿ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಈ ಮಾಹಿತಿ ನೀಡಿದ್ದಾರೆ.

ಕೇಂದ್ರದ ಈ ನಿರ್ಧಾರದಿಂದ ಲಕ್ಷಾಂತರ ಉದ್ಯೋಗ ಆಕಾಂಕ್ಷಿಗಳಿಗೆ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ಬರೆಯಲು ಸಾಧ್ಯವಿದ್ದು, ಸರ್ಕಾರಿ ನೌಕರರಿಗೆ ಆಯ್ಕೆಯಾಗುವ ಸಾಧ್ಯತೆ ಹೆಚ್ಚಿಸಲಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular