HomeKarnatakaBIG NEWS: ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಕಳ್ಳತನ: ಟೆಕ್ಕಿ ಅರೆಸ್ಟ್

BIG NEWS: ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಕಳ್ಳತನ: ಟೆಕ್ಕಿ ಅರೆಸ್ಟ್

ಬೆಂಗಳೂರು: ಸಾಲ ತೀರಿಸಲು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಲ್ಯಾಪ್ ಟಾಪ್ ಗಳನ್ನು ಕಳ್ಳತನ ಮಾಡಿದ್ದ ಟೆಕ್ಕಿಯನ್ನು ಬೆಂಗಳೂರು ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.

ಮುರುಗೇಶ್ ಬಂಧಿತ ಟೆಕ್ಕಿ. ಐಟಿಪಿಎಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈತ, ಅದೇ ಕಂಪನಿಯಲ್ಲಿ ಲ್ಯಾಪ್ ಟಾಪ್ ಗಳನ್ನು ಕದ್ದಿದ್ದ. ಬಂಧಿತನಿಂದ 22 ಲಕ್ಷ ಮೌಲ್ಯದ 50 ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಟೆಕ್ಕಿಯಾಗಿದ್ದ ಮುರುಗೇಶ್, ಸಾಲ ಮಾಡಿ 6 ಎಕರೆಯಲ್ಲಿ ಟೊಮ್ಯಾಟೊ ಬೆಳೆದಿದ್ದ. ಆದರೆ ಟೊಮ್ಯಾಟೊ ಬೆಳೆ ನಷ್ಟವಾಗಿ ಸಾಲ ತೀರಿಸಲು ಸಾಧ್ಯವಾಗದೇ ತಾನು ಕೆಲಸ ಮಾಡುತ್ತಿದ್ದ ಕಂಪನಿಯಲ್ಲಿಯೇ ಲ್ಯಾಪ್ ಟಾಪ್ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular