HomeLatest Newsಗಮನಿಸಿ : ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನ.30...

ಗಮನಿಸಿ : ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ

ಬೆಂಗಳೂರು : ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನಲ್ಲಿ ಶ್ರಮಶಕ್ತಿ ಸಾಲ/ ಸಹಾಯಧನ ಯೋಜನೆ , ಶ್ರಮ ಶಕ್ತಿ (ವಿಶೇಷ ಮಹಿಳಾ ಸಾಲ / ಸಹಾಯಧನ)ಯೋಜನೆ, ಟ್ಯಾಕ್ಸಿ / ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆ, ವೃತ್ತಿ ಪೋತ್ಸಾಹ ಸಾಲ / ಸಹಾಯಧನ ಯೋಜನೆ, ಕ್ರಿಶ್ಚಿಯನ್ ಸಮುದಾಯ ಆಧಾರಿತ ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನ, ಅರಿವು (ವಿದ್ಯಾಭ್ಯಾಸ ಸಾಲ ಯೋಜನೆ) ಗಂಗಾ ಕಲ್ಯಾಣ ಯೋಜನೆ, ವ್ಯಾಪಾರ ಉದ್ದಿಮೆ / ನೇರಸಾಲ ಯೋಜನೆ ಮತ್ತು ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಹಾಯಧನ ಯೋಜನೆಯಡಿಯಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಕ್ರಿಶ್ಚಿಯನ್ ಸಮುದಾಯದವರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ವೆಬ್ ಸೈಟ್ www.kccdclonline.karnataka.gov.in ನಲ್ಲಿ ನವೆಂಬರ್ 30, 2025ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ ( ದಕ್ಷಿಣ ವಿಭಾಗ), ಹಮೀದ್ ಷಾ ಕಾಂಪ್ಲೆಕ್ಸ್, 2ನೇ ಮಹಡಿ, ಎಸ್.ಎಫ್. 2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು ನಗರ ಜಿಲ್ಲೆಅಥವಾ ದೂರವಾಣಿ ಸಂಖ್ಯೆ : 080-22114817, ಇ-ಮೇಲ್ [email protected], ಸಹಾಯವಾಣಿ ಸಂಖ್ಯೆ : 6360753075 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ (ದಕ್ಷಿಣ ವಿಭಾಗ) ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular