ಈಶಾನ್ಯ ಪದವೀಧರರ ಕ್ಷೇತ್ರಗಳ ಮತದಾರರ ನೊಂದಣಿಗೆ ನ.6 ಕೊನೆಯ ದಿನ

ಬಳ್ಳಾರಿ : ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಖಾಯಂ ಮತ್ತು ಹೊರಗುತ್ತಿಗೆ ನೌಕರರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಅರ್ಹ ಮತದಾರರಿಗೆ ನಿಗದಿಪಡಿಸಿದ ಕಚೇರಿಯಿಂದ ನಮೂನೆ-18 ಪಡೆದು, ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಎಲ್ಲಾ ಅರ್ಹ ಮತದಾರರ ವಿವರಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2020ರ ನ.01 ಕ್ಕಿಂತ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ್ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂಧೃಡೀಕರಿಸಿ ಅಥವಾ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ನ.06 ರೊಳಗಾಗಿ ಮತದಾರರ ನೊಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read