
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ 2020ರ ನ.01 ಕ್ಕಿಂತ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ-18 ರಲ್ಲಿ (ಭಾವ ಚಿತ್ರದೊಂದಿಗೆ) ಭರ್ತಿಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿ, ಆಧಾರ್ಕಾರ್ಡ್, ಚುನಾವಣಾ ಗುರುತಿನ ಚೀಟಿ ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂಧೃಡೀಕರಿಸಿ ಅಥವಾ ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ನ.06 ರೊಳಗಾಗಿ ಮತದಾರರ ನೊಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ಮಹಾನಗರ ಪಾಲಿಕೆ ಹಾಗೂ ತಹಶೀಲ್ದಾರರ ಕಾರ್ಯಾಲಯದಲ್ಲಿ) ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

