HomeLatest Newsತಡರಾತ್ರಿ ರಾಜ್ಯ ಹೆದ್ದಾರಿ ಟೋಲ್ ಮೇಲೆ ದಾಳಿ: ಶಾಸಕಿ ಸೋದರ, ಪುತ್ರ ಸೇರಿ ಹಲವರ ವಿರುದ್ಧ...

ತಡರಾತ್ರಿ ರಾಜ್ಯ ಹೆದ್ದಾರಿ ಟೋಲ್ ಮೇಲೆ ದಾಳಿ: ಶಾಸಕಿ ಸೋದರ, ಪುತ್ರ ಸೇರಿ ಹಲವರ ವಿರುದ್ಧ ಕೇಸ್

ರಾಯಚೂರು: ಸಾರ್ವಜನಿಕರ ವಿರೋಧದ ನಡುವೆಯೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕಾಕರಗಲ್ ಸಮೀಪ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿರ್ಮಿಸಿದ ಟೋಲ್ ಮೇಲೆ ಬುಧವಾರ ತಡರಾತ್ರಿ ಜೆಡಿಎಸ್ ಕಾರ್ಯಕರ್ತರು, ಗ್ರಾಮಸ್ಥರು, ದಿಢೀರ್ ದಾಳಿ ಮಾಡಿ ಹಲವು ವಸ್ತುಗಳು, ಪರಿಕರಗಳನ್ನು ಧ್ವಂಸ ಮಾಡಿದ್ದಾರೆ.

ಬೈಕ್ ಮತ್ತು ಕಾರ್ ಗಳಲ್ಲಿ ಬಂದ ನೂರಾರು ಜನ ಟೋಲ್ ನಿರ್ಮಾಣ ಖಂಡಿಸಿ ಕೆಲವು ಕಾಲ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಶಾಸಕರಾದ ಕರೆಮ್ಮ ಜಿ. ನಾಯಕ ಸ್ಥಳಕ್ಕೆ ಭೇಟಿ ನೀಡಿದ್ದರು. ಶಾಸಕರನ್ನು ಕಂಡು ಪ್ರಚೋದಿತರಾದ ಪ್ರತಿಭಟನಾಕಾರರು ಬ್ಯಾರಿಕೇಡ್ ಗಳನ್ನು ಮುರಿದು ಸಿಸಿ ಟಿವಿ ಕ್ಯಾಮರಾಗಳನ್ನು ಕಿತ್ತೆಸೆದು ಕಂಪ್ಯೂಟರ್ ಗಳನ್ನು ಹಾನಿಗೊಳಿಸಿದ್ದಾರೆ. ಕಿಟಕಿ ಗಾಜು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗಬ್ಬೂರು ಠಾಣೆ ಪೊಲೀಸರು ಹಲವರನ್ನು ವಶಕ್ಕೆ ಪಡೆದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮೇಲ್ವಿಚಾರಣೆಯಲ್ಲಿದ್ದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ನವೀನ್ ಕುಮಾರ್ ಅವರು ಗಬ್ಬೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಶಾಸಕಿಯ ಸಹೋದರ ತಿಮ್ಮರೆಡ್ಡಿ ನಾಯಕ, ಪುತ್ರ ಸಂತೋಷ ನಾಯಕ ಕಾರ್ಯಕರ್ತ ಸಲೀಂ ಕಾಕರಗಲ್ ಸೇರಿದಂತೆ 12ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular