HomeLatest NewsBREAKING NEWS: ತಡರಾತ್ರಿ ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

BREAKING NEWS: ತಡರಾತ್ರಿ ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ: ಓರ್ವ ಸಾವು, ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಮಧ್ಯರಾತ್ರಿ ಹೆಬ್ಬಾಳ ಫ್ಲೈಓವರ್ ಮೇಲೆ ಸರಣಿ ಅಪಘಾತ ಸಂಭವಿಸಿದೆ. 10 ಚಕ್ರದ ಲಾರಿ, ಕಸದ ಲಾರಿ ಮತ್ತು ಕಾರ್  ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಕಸದ ಲಾರಿ ಚಾಲಕ ಫಯಾಜ್ ಅಹಮದ್ ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆಬ್ಬಾಳ ಫ್ಲೈಓವರ್ ಮೇಲೆ ಕಲ್ಲು ತುಂಬಿದ ಟ್ರಕ್ ಪಲ್ಟಿಯಾಗಿದೆ. ಕಸದ ಲಾರಿಗೆ ಹಿಂಬದಿಯಿಂದ 10 ಚಕ್ರದ ಲಾರಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಲ್ಲಿನ ಬ್ಲಾಕ್ ಗಳನ್ನು ತುಂಬಿದ್ದ ಲಾರಿ ಪಲ್ಟಿ ಆಗಿದ್ದು, ಕಸದ ಲಾರಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಬ್ಬಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular