alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ವಾಹನ ಮಾಲೀಕರಿಗೆ ಮತ್ತೊಂದು ಶಾಕ್: ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಸಿದ್ಧತೆ

ದೇಶದಲ್ಲಿ ವಕ್ಕರಿಸಿರುವ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ವ್ಯಾಪಾರ ವಹಿವಾಟಿಲ್ಲದೆ ಸಾರ್ವಜನಿಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ನಾಲ್ಕನೇ ಹಂತದ ಲಾಕ್ಡೌನ್ ಜಾರಿ ಸಂದರ್ಭದಲ್ಲಿ ಕೆಲವೊಂದು ಸಡಿಲಿಕೆ ಮಾಡಿ ವ್ಯಾಪಾರ ವಹಿವಾಟಿಗೆ ಅನುಕೂಲ ಮಾಡಿಕೊಟ್ಟಿದ್ದರೂ ಸಹ ಅದು ಸುಸ್ಥಿತಿಗೆ ಬರಲು ಹಲವು ತಿಂಗಳುಗಳೇ ಬೇಕಾಗುತ್ತದೆ. ಇದರ ಮಧ್ಯೆ ರಾಜ್ಯ ಸರ್ಕಾರ ಜನರ ಮೇಲೆ ಮತ್ತೊಂದು ಹೊರೆ ಹೇರಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ರಾಜ್ಯದ 17 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗಿದ್ದು, ಇದರಿಂದ ವಾರ್ಷಿಕ 68 ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ. ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರ್ವಜನಿಕರಿಗೆ ಸರ್ಕಾರದ ಈ ಕ್ರಮ ಮತ್ತಷ್ಟು ಹೊಡೆತ ನೀಡಲಿದೆ.

Subscribe Newsletter

Get latest updates on your inbox...

Opinion Poll

  • ಕರೋನಾ ಸೋಂಕು ನಿಯಂತ್ರಣಕ್ಕೆ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳು ತೃಪ್ತಿದಾಯಕವಾಗಿದೆಯೇ...?

    View Results

    Loading ... Loading ...