alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಬೈಲ್ ಬಳಕೆದಾರರಿಗೆ ಬಿಗ್ ಶಾಕ್: ಕರೆ ದರಗಳಲ್ಲಿ ಮತ್ತೆ ಭಾರಿ ಏರಿಕೆ…?

ಟೆಲಿಕಾಂ ಕ್ಷೇತ್ರಕ್ಕೆ ರಿಲಯನ್ಸ್ ಜಿಯೋ ಎಂಟ್ರಿಯಾದ ಬಳಿಕ ದರ ಸಮರಕ್ಕೆ ಇಳಿದಿದ್ದ ಕಂಪನಿಗಳು ಪೈಪೋಟಿಯಲ್ಲಿ ಉಚಿತ ಸೇವೆಗಳನ್ನು ನೀಡಿದ್ದವು. ಇದರ ಪರಿಣಾಮವಾಗಿ ನಷ್ಟದ ಸುಳಿಗೆ ಸಿಲುಕಿದ್ದು, ಹೀಗಾಗಿ ಕಳೆದ ಡಿಸೆಂಬರ್ ಮೊದಲ ವಾರದಲ್ಲಿ ಮೊಬೈಲ್ ಸೇವಾ ದರಗಳಲ್ಲಿ ಏರಿಕೆ ಮಾಡಿದ್ದವು.

ಇದೀಗ ಮೊಬೈಲ್ ಬಳಕೆದಾರರಿಗೆ ಮತ್ತೊಂದು ದೊಡ್ಡ ಶಾಕ್ ಕಾದಿದೆ ಎನ್ನಲಾಗಿದ್ದು, ಶೀಘ್ರದಲ್ಲೇ ಕರೆ ದರಗಳಲ್ಲಿ ಶೇಕಡಾ 25ರಷ್ಟು ಏರಿಕೆಯಾಗಲಿದೆ ಎಂದು ಹೇಳಲಾಗಿದೆ. ಟೆಲಿಕಾಂ ಕಂಪನಿಗಳು ಕೇಂದ್ರ ಸರ್ಕಾರಕ್ಕೆ 1.47 ಲಕ್ಷ ಕೋಟಿ ರೂಪಾಯಿ ಪಾವತಿಸಬೇಕಿದ್ದು, ಹೀಗಾಗಿ ಇದರ ಹೊರೆಯನ್ನು ಗ್ರಾಹಕರಿಗೆ ವರ್ಗಾಯಿಸಲು ಟೆಲಿಕಾಂ ಕಂಪನಿಗಳು ಮುಂದಾಗಿವೆ.

ಸರ್ಕಾರಕ್ಕೆ ಕಟ್ಟಬೇಕಾದ ಹಣವನ್ನು ಬಾಕಿ ಉಳಿಸಿಕೊಂಡಿರುವ ಕಾರಣ ಟೆಲಿಕಾಂ ಕಂಪನಿಗಳ ಮೇಲೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದ್ದು, ಶೀಘ್ರದಲ್ಲೇ ಇದನ್ನು ಪಾವತಿಸಬೇಕಿದೆ. ಹೀಗಾಗಿ ಕರೆ ದರಗಳ ಏರಿಕೆ ಮಾಡುವ ಮೂಲಕ ತಮಗಾಗುವ ಹೆಚ್ಚಿನ ಹೊರೆಯನ್ನು ಗ್ರಾಹಕರ ಮೇಲೂ ಹೇರಲು ಟೆಲಿಕಾಂ ಕಂಪನಿಗಳು ನಿರ್ಧರಿಸಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉಳಿದ ಅವಧಿಯನ್ನು ಪೂರೈಸಲಿದೆಯಾ...?

    View Results

    Loading ... Loading ...