alex Certify ಅಬ್ಬಬ್ಬಾ…! ಮದ್ಯದ ಮೇಲಿನ ಹೆಚ್ಚುವರಿ ತೆರಿಗೆಯಿಂದ ಹರಿದು ಬರಲಿರುವ ಆದಾಯವೆಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಬ್ಬಬ್ಬಾ…! ಮದ್ಯದ ಮೇಲಿನ ಹೆಚ್ಚುವರಿ ತೆರಿಗೆಯಿಂದ ಹರಿದು ಬರಲಿರುವ ಆದಾಯವೆಷ್ಟು ಗೊತ್ತಾ…?

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿ ಮಾಡಿರುವ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರಗಳು ಆದಾಯವಿಲ್ಲದೆ ಕಂಗೆಟ್ಟಿದ್ದವು. ಸರ್ಕಾರಿ ನೌಕರರ ಸಂಬಳ ಕೊಡಲೂ ಮೀನಾಮೇಷ ಎಣಿಸುವಂತಾಗಿತ್ತು.

ಇದೀಗ ಮೂರನೇ ಹಂತದ ಲಾಕ್ ಡೌನ್ ನಲ್ಲಿ ಕೇಂದ್ರ ಸರ್ಕಾರ ಹಲವು ವಿನಾಯಿತಿಗಳನ್ನು ನೀಡಿದೆ. ಅದರಲ್ಲೂ ಆರ್ಥಿಕ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಿದ್ದು, ರಾಜ್ಯ ಸರ್ಕಾರಗಳು ಮದ್ಯ ಮಾರಾಟಕ್ಕೆ ಅನುಮತಿ ನೀಡಲು ಅವಕಾಶ ನೀಡಿದೆ. ಹೀಗಾಗಿ ಸೋಮವಾರದಿಂದ ಕರ್ನಾಟಕದಲ್ಲಿ ಮದ್ಯ ಮಾರಾಟ ಆರಂಭವಾಗಿದ್ದು, ಮದ್ಯಪ್ರಿಯರು ಮುಗಿಬಿದ್ದು ಖರೀದಿಸಿದ್ದಾರೆ.

ಇದರ ಮಧ್ಯೆ ರಾಜ್ಯ ಸರ್ಕಾರ ಮದ್ಯದ ಮೇಲೆ ಹೆಚ್ಚುವರಿಯಾಗಿ ಶೇಕಡಾ 11 ತೆರಿಗೆ ನಿಗದಿ ಮಾಡಿದ್ದು, ಇದರಿಂದಾಗಿ ಬರೋಬ್ಬರಿ 3700 ಕೋಟಿ ರೂಪಾಯಿ ಆದಾಯ ಹರಿದು ಬರಲಿದೆ ಎಂದು ಹೇಳಲಾಗಿದೆ. ಕರ್ನಾಟಕದಲ್ಲಿ ಈ ವರ್ಷ ಮದ್ಯ ಮಾರಾಟದಿಂದ 22,700 ಕೋಟಿ ರೂಪಾಯಿ ನಿರೀಕ್ಷಿಸಲಾಗಿದ್ದು, ಇದೀಗ ಹೆಚ್ಚುವರಿ ತೆರಿಗೆ ವಿಧಿಸಿರುವುದರಿಂದ ಆದಾಯ 26,400 ಕೋಟಿ ರೂಪಾಯಿ ತಲುಪಬಹುದೆಂದು ಅಂದಾಜಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...