ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನ ಮುಟ್ಟುತ್ತಿದ್ದರೆ ಇದಕ್ಕೆ ವ್ಯತಿರಿಕ್ತವಾಗಿ ಚಿನ್ನದ ಬೆಲೆ ಇಳಿಕೆಯಾಗತೊಡಗಿದೆ. ಕಳೆದ ಎಂಟು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಚಿನ್ನದ ಬೆಲೆ ತಲುಪಿದ್ದು, ಗುರುವಾರದಂದು 10 ಗ್ರಾಂ ಚಿನ್ನ 45,867 ರೂಪಾಯಿಗೆ ಮಾರಾಟವಾಗಿದೆ.
ಕಳೆದ ಎರಡು ದಿನಗಳಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,037 ರೂಪಾಯಿಗಳಷ್ಟು ಇಳಿಕೆಯಾಗಿದ್ದು, ಇದು ಖರೀದಿದಾರರಲ್ಲಿ ಸಂತಸ ಮೂಡಿಸಿದೆ. ಅದರಲ್ಲೂ ಶುಭಕಾರ್ಯಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಚಿನ್ನದ ದರ ಇಳಿಕೆಯಾಗುತ್ತಿರುವುದು ಆಭರಣ ಪ್ರಿಯರ ಮಂದಹಾಸಕ್ಕೆ ಕಾರಣವಾಗಿದೆ.
ವರ್ಗಾವಣೆ – ಬಡ್ತಿ ಕುರಿತಂತೆ KSRP ಸಿಬ್ಬಂದಿಗೆ ‘ನೆಮ್ಮದಿ’ ಸುದ್ದಿ
ಗುರುವಾರದಂದು ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಕಂಡು ಬಂದಿದ್ದು 28 ರೂಪಾಯಿಗಳಷ್ಟು ಏರಿಕೆಯಾಗುವ ಮೂಲಕ ಕೆಜಿ ಬೆಳ್ಳಿ ಬೆಲೆ 68,283 ರೂಪಾಯಿ ತಲುಪಿದೆ.