alex Certify ಆಭರಣ ಪ್ರಿಯರಿಗೆ ಬಂಪರ್ ಸುದ್ದಿ: ಎರಡು ದಿನಗಳಲ್ಲಿ ಚಿನ್ನದ ಬೆಲೆ 1,037 ರೂ. ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಭರಣ ಪ್ರಿಯರಿಗೆ ಬಂಪರ್ ಸುದ್ದಿ: ಎರಡು ದಿನಗಳಲ್ಲಿ ಚಿನ್ನದ ಬೆಲೆ 1,037 ರೂ. ಇಳಿಕೆ

ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನ ಮುಟ್ಟುತ್ತಿದ್ದರೆ ಇದಕ್ಕೆ ವ್ಯತಿರಿಕ್ತವಾಗಿ ಚಿನ್ನದ ಬೆಲೆ ಇಳಿಕೆಯಾಗತೊಡಗಿದೆ. ಕಳೆದ ಎಂಟು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಚಿನ್ನದ ಬೆಲೆ ತಲುಪಿದ್ದು, ಗುರುವಾರದಂದು 10 ಗ್ರಾಂ ಚಿನ್ನ 45,867 ರೂಪಾಯಿಗೆ ಮಾರಾಟವಾಗಿದೆ.

ಕಳೆದ ಎರಡು ದಿನಗಳಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,037 ರೂಪಾಯಿಗಳಷ್ಟು ಇಳಿಕೆಯಾಗಿದ್ದು, ಇದು ಖರೀದಿದಾರರಲ್ಲಿ ಸಂತಸ ಮೂಡಿಸಿದೆ. ಅದರಲ್ಲೂ ಶುಭಕಾರ್ಯಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ ಚಿನ್ನದ ದರ ಇಳಿಕೆಯಾಗುತ್ತಿರುವುದು ಆಭರಣ ಪ್ರಿಯರ ಮಂದಹಾಸಕ್ಕೆ ಕಾರಣವಾಗಿದೆ.

ವರ್ಗಾವಣೆ – ಬಡ್ತಿ ಕುರಿತಂತೆ KSRP ಸಿಬ್ಬಂದಿಗೆ ‘ನೆಮ್ಮದಿ’ ಸುದ್ದಿ

ಗುರುವಾರದಂದು ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಕಂಡು ಬಂದಿದ್ದು 28 ರೂಪಾಯಿಗಳಷ್ಟು ಏರಿಕೆಯಾಗುವ ಮೂಲಕ ಕೆಜಿ ಬೆಳ್ಳಿ ಬೆಲೆ 68,283 ರೂಪಾಯಿ ತಲುಪಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...