alex Certify ಆಭರಣ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ದರದಲ್ಲಿ ಭಾರಿ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಭರಣ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ದರದಲ್ಲಿ ಭಾರಿ ಏರಿಕೆ

ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತ ಕಾಣುತ್ತಿದ್ದು, ಆದರೆ ಸೋಮವಾರದಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು ಆಭರಣ ಪ್ರಿಯರಿಗೆ ಶಾಕ್ ನೀಡಿದೆ.

10 ಗ್ರಾಂ ಚಿನ್ನದ ಬೆಲೆಯಲ್ಲಿ 348 ರೂಪಾಯಿ ಏರಿಕೆಯಾಗಿದ್ದು, ಇದೀಗ ಬೆಲೆ 46,959 ರೂಪಾಯಿಗೆ ಬಂದು ತಲುಪಿದೆ. ಬೆಳ್ಳಿ ಬೆಲೆಯಲ್ಲೂ ಕೆಜಿಗೆ 794 ರೂಪಾಯಿ ಏರಿಕೆಯಾಗುವ ಮೂಲಕ 49,245 ರೂಪಾಯಿ ತಲುಪಿದೆ.

ಐದನೇ ಹಂತದ ಲಾಕ್ಡೌನ್ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆಗಳನ್ನು ಮಾಡಿರುವ ಕಾರಣ ಆರ್ಥಿಕ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ಹೀಗಾಗಿ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಮತ್ತಷ್ಟು ಬೇಡಿಕೆ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...