ಯುಎಸ್ ಡಾಲರ್ ದುರ್ಬಲಗೊಂಡಿದ್ದರಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ದೇಶಿ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ. ಗುರುವಾರ ದೆಹಲಿ ಬುಲಿಯನ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 287 ರೂಪಾಯಿ ಏರಿಕೆ ಕಂಡಿದೆ.
ಬೆಳ್ಳಿಯ ಬೆಲೆಯಲ್ಲೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ 875 ರೂಪಾಯಿಗಳಷ್ಟು ಏರಿಕೆಯಾಗಿದೆ. ಈ ಏರಿಕೆ ಸ್ಥಿರವಲ್ಲವೆಂದು ತಜ್ಞರು ಹೇಳ್ತಿದ್ದಾರೆ. ಕೋಮಾಕ್ಸ್ ನಲ್ಲಿ ಚಿನ್ನದ ಬೆಲೆ 1900 ಡಾಲರ್ ಪ್ರತಿ ಔನ್ಸ್ ಇಳಿಕೆಯಾಗುವ ಸಾಧ್ಯತೆಯಿದೆ. ಇದು ದೇಶಿ ಮಾರುಕಟ್ಟೆ ಮೇಲೂ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ.
ಸತತ ನಾಲ್ಕು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರ್ತಿದೆ. ಇಂದು ಶೇಕಡಾ 99.9 ರಷ್ಟು ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 52,391 ರೂಪಾಯಿಯಾಗಿದೆ. ಗುರುವಾರ ಒಂದು ಕಿಲೋಗ್ರಾಂ ಬೆಳ್ಳಿಯ ಬೆಲೆ ಹತ್ತು ಗ್ರಾಂಗೆ 69,950 ರೂಪಾಯಿ ಏರಿಕೆಯಾಗಿದೆ.