alex Certify ಆರ್ಡರ್ ಮಾಡಿದ್ರೆ ಮನೆ ಬಾಗಿಲಿಗೆ ಬರಲಿದೆ ‘ಮದ್ಯ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್ಡರ್ ಮಾಡಿದ್ರೆ ಮನೆ ಬಾಗಿಲಿಗೆ ಬರಲಿದೆ ‘ಮದ್ಯ’

ಮಹಾಮಾರಿ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರ, ಇದೀಗ ಲಾಕ್ ಡೌನ್ ನಿಯಮಾವಳಿಗಳಲ್ಲಿ ಕೊಂಚ ಸಡಿಲಿಕೆ ಮಾಡಿ ಕೆಲವೊಂದು ಆರ್ಥಿಕ ಚಟುವಟಿಕೆಗಳಿಗೆ ಅನುಕೂಲ ಕಲ್ಪಿಸಿದ್ದು, ಇದರಲ್ಲಿ ಮದ್ಯ ಮಾರಾಟವೂ ಒಂದು.

ಹೀಗಾಗಿ ದೇಶದ ಬಹುತೇಕ ರಾಜ್ಯಗಳಲ್ಲಿ ಸೋಮವಾರದಿಂದ ಮದ್ಯ ಮಾರಾಟ ಆರಂಭವಾಗಿದ್ದು, ಲಾಕ್ ಡೌನ್ ಕಾರಣಕ್ಕೆ ಮದ್ಯದಂಗಡಿಗಳು ಕಳೆದ ನಲವತ್ತು ದಿನಗಳಿಂದ ಬಂದ್ ಆಗಿದ್ದ ಕಾರಣ ಕಂಗೆಟ್ಟಿದ್ದ ಮದ್ಯ ಪ್ರಿಯರು ಮುಗಿಬಿದ್ದು ಖರೀದಿಸುತ್ತಿದ್ದಾರೆ.

ಇದರ ಮಧ್ಯೆ ಪಂಜಾಬ್ ಸರ್ಕಾರ ಮದ್ಯದಂಗಡಿಗಳ ಮುಂದೆ ಜನಜಂಗುಳಿ ಆಗಬಾರದೆಂಬ ಕಾರಣಕ್ಕೆ ಮದ್ಯವನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲು ಮುಂದಾಗಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರವರೆಗೆ ಅಂಗಡಿಗಳಲ್ಲಿ ಮದ್ಯ ಮಾರಾಟ ನಡೆಯಲಿದ್ದು, ಮಧ್ಯಾಹ್ನ 1 ರಿಂದ 6 ಗಂಟೆಯವರೆಗೆ ಹೋಂ ಡೆಲಿವರಿ ಮೂಲಕ ಮದ್ಯವನ್ನು ಪಡೆಯಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...