ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿದ್ದು, ಒಂದೊಮ್ಮೆ ಫಾಸ್ಟ್ ಟ್ಯಾಗ್ ಇಲ್ಲದೆ ಆಗಮಿಸುವ ವಾಹನಗಳಿಗೆ ದುಪ್ಪಟ್ಟು ಟೋಲ್ ಶುಲ್ಕ ವಿಧಿಸಲಾಗುತ್ತಿದೆ. ಇದರ ಜೊತೆಗೆ ಮುಗಿಲು ಮುಟ್ಟಿರುವ ಪೆಟ್ರೋಲ್ – ಡೀಸೆಲ್ ಬೆಲೆಯೂ ವಾಹನ ಸವಾರರನ್ನು ಹೈರಾಣಾಗಿಸಿದೆ.
ಕೊರೊನಾ ಲಾಕ್ಡೌನ್ ಕಾರಣಕ್ಕೆ ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಸಾಮಾನ್ಯರಿಗೆ ಸರ್ಕಾರಗಳು ಹೊರೆ ಮೇಲೆ ಹೊರೆ ಹಾಕುತ್ತಿದ್ದು, ಇದರಿಂದಾಗಿ ಬದುಕು ನಡೆಸುವುದೇ ದುಸ್ತರವಾಗಿದೆ. ಇದರ ಮಧ್ಯೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕೈಗೊಂಡಿರುವ ನಿರ್ಧಾರವೊಂದು ಮತ್ತೊಂದು ಶಾಕ್ ನೀಡಿದೆ.
91ನೇ ಇಳಿವಯಸ್ಸಿನಲ್ಲೂ ಪೊಲೀಸ್ ಇಲಾಖೆಯಲ್ಲಿ ಸೇವೆ..! ದಣಿವರಿಯದ ಅಧಿಕಾರಿಗೆ ಇಲ್ಲ ನಿವೃತ್ತಿ ಹೊಂದುವ ʼಪ್ಲಾನ್ʼ
ರಾಷ್ಟ್ರೀಯ ಹೆದ್ದಾರಿಗಳಂತೆ ರಾಜ್ಯ ಹೆದ್ದಾರಿಗಳಲ್ಲೂ ವಾಹನ ಸವಾರರಿಂದ ಟೋಲ್ ಶುಲ್ಕ ಪಡೆಯಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಮುಂದಾಗಿದ್ದು, ಇದಕ್ಕಾಗಿ 10 ಮಾರ್ಗಗಳನ್ನು ಗುರುತಿಸಲಾಗಿದೆ. ಈ ಮಾರ್ಗಗಳಲ್ಲಿ ಶುಲ್ಕ ಸಂಗ್ರಹಕ್ಕೆ ಏಜೆನ್ಸಿಗಳಿಂದ ಬಿಡ್ ಆಹ್ವಾನಿಸಲಾಗಿದೆ ಎನ್ನಲಾಗಿದ್ದು, ಈ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.