alex Certify ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ವಾಹನ ಮಾಲೀಕರಿಗೆ ಮತ್ತೊಂದು ಶಾಕ್: ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ವಾಹನ ಮಾಲೀಕರಿಗೆ ಮತ್ತೊಂದು ಶಾಕ್: ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಸಿದ್ಧತೆ

ದೇಶದಲ್ಲಿ ವಕ್ಕರಿಸಿರುವ ಕೊರೊನಾ ಮಹಾಮಾರಿಯ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರ ಪರಿಣಾಮವಾಗಿ ವ್ಯಾಪಾರ ವಹಿವಾಟಿಲ್ಲದೆ ಸಾರ್ವಜನಿಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ನಾಲ್ಕನೇ ಹಂತದ ಲಾಕ್ಡೌನ್ ಜಾರಿ ಸಂದರ್ಭದಲ್ಲಿ ಕೆಲವೊಂದು ಸಡಿಲಿಕೆ ಮಾಡಿ ವ್ಯಾಪಾರ ವಹಿವಾಟಿಗೆ ಅನುಕೂಲ ಮಾಡಿಕೊಟ್ಟಿದ್ದರೂ ಸಹ ಅದು ಸುಸ್ಥಿತಿಗೆ ಬರಲು ಹಲವು ತಿಂಗಳುಗಳೇ ಬೇಕಾಗುತ್ತದೆ. ಇದರ ಮಧ್ಯೆ ರಾಜ್ಯ ಸರ್ಕಾರ ಜನರ ಮೇಲೆ ಮತ್ತೊಂದು ಹೊರೆ ಹೇರಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ರಾಜ್ಯದ 17 ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗಿದ್ದು, ಇದರಿಂದ ವಾರ್ಷಿಕ 68 ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ. ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಸಾರ್ವಜನಿಕರಿಗೆ ಸರ್ಕಾರದ ಈ ಕ್ರಮ ಮತ್ತಷ್ಟು ಹೊಡೆತ ನೀಡಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...