alex Certify ಈ ಕಾರಣಕ್ಕೆ ಸೆಕೆಂಡ್ ಹ್ಯಾಂಡ್ ಕಾರುಗಳಿಗೆ ಏರಿದೆ ಬೇಡಿಕೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಕಾರಣಕ್ಕೆ ಸೆಕೆಂಡ್ ಹ್ಯಾಂಡ್ ಕಾರುಗಳಿಗೆ ಏರಿದೆ ಬೇಡಿಕೆ…!

ಐದನೇ ಹಂತದ ಕೊರೊನಾ ಲಾಕ್ಡೌನ್ ದೇಶದಾದ್ಯಂತ ಜಾರಿಯಲ್ಲಿದ್ದರೂ ಸಹ ಬಹಳಷ್ಟು ಸಡಿಲಿಕೆ ಮಾಡಿರುವ ಕಾರಣ ಆರ್ಥಿಕ ಚಟುವಟಿಕೆಗಳು ಆರಂಭವಾಗಿವೆ. ಹೀಗಾಗಿ ಬಂದ್ ಆಗಿದ್ದ ಅಂಗಡಿ-ಮುಂಗಟ್ಟು, ಹೋಟೆಲ್, ರೆಸ್ಟೋರೆಂಟ್ ಗಳು ತೆರೆದಿದ್ದು, ಬೆರಳೆಣಿಕೆಯ ಚಟುವಟಿಕೆ ಹೊರತುಪಡಿಸಿ ಉಳಿದೆಲ್ಲವೂ ಬಹುತೇಕ ಆರಂಭವಾದಂತಾಗಿದೆ.

ಇದರ ಜೊತೆಗೆ ವಾಹನ ಮಾರಾಟವೂ ಚುರುಕು ಪಡೆದುಕೊಂಡಿದ್ದು, ಕೊರೊನಾ ಲಾಕ್ಡೌನ್ ಗಿಂತ ಮುಂಚಿತವಾಗಿಯೇ ಆರ್ಥಿಕ ಹಿಂಜರಿತದ ಕಾರಣ ತೀವ್ರ ಸಂಕಷ್ಟ ಎದುರಿಸಿದ್ದ ಆಟೋಮೊಬೈಲ್ ಉದ್ಯಮ ಈಗ ಚೇತರಿಕೆಯ ಹಾದಿಯತ್ತ ಸಾಗಿದೆ.

ಸೆಕೆಂಡ್ ಹ್ಯಾಂಡ್ ಕಾರುಗಳ ಬೇಡಿಕೆ ಹೆಚ್ಚಾಗಿದೆ ಎನ್ನಲಾಗಿದ್ದು, ಕೊರೊನಾ ಕಾರಣಕ್ಕೆ ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸಲು ಹಿಂಜರಿಯುತ್ತಿರುವ ಸಾರ್ವಜನಿಕರು, ಕಾರು ಖರೀದಿಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೊಸ ಕಾರು ಖರೀದಿಸಲು ಆರ್ಥಿಕ ಸಂಕಷ್ಟ ಇರುವ ಕಾರಣ ಸೆಕೆಂಡ್ ಹ್ಯಾಂಡ್ ಕಾರು ಖರೀದಿಗೆ ಆಸಕ್ತಿ ತೋರಿಸುತ್ತಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...