ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಭಾರತದ ಅತಿ ಸಿರಿವಂತ ವ್ಯಕ್ತಿ ಮುಖೇಶ್ ಅಂಬಾನಿಯವರ ಸಂಪತ್ತಿನಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದೆ. ಗೂಗಲ್, ಫೇಸ್ಬುಕ್ ಸೇರಿದಂತೆ ವಿಶ್ವದ ಬೃಹತ್ ಸಂಸ್ಥೆಗಳು ರಿಲಯನ್ಸ್ ಜೊತೆ ಕೈಜೋಡಿಸಿವೆ.
ಕೆಲ ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ವಿಶ್ವದ ಟಾಪ್ 5 ಶ್ರೀಮಂತರಾಗಿ ಹೊರಹೊಮ್ಮಿದ್ದರು. ಇದೀಗ ಅವರ ರಿಲಯನ್ಸ್ ಇಂಡಸ್ಟ್ರೀಸ್ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಗಮನ ಸೆಳೆದಿದೆ.
ವಿಶ್ವದ ಟಾಪ್ 50 ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ 48ನೇ ಸ್ಥಾನ ಪಡೆದುಕೊಂಡಿದ್ದು, ಇದರ ಮಾರುಕಟ್ಟೆ ಮೌಲ್ಯ ಈಗ 13 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಶುಕ್ರವಾರದಂದು ರಿಲಯನ್ಸ್ ಇಂಡಸ್ಟ್ರೀಸ್ ಷೇರು ಮೌಲ್ಯ ಶೇಕಡಾ 4 ರಷ್ಟು ಏರಿಕೆಯಾಗಿದ್ದು, ಒಟ್ಟಾರೆ ಮಾರುಕಟ್ಟೆ ಬಂಡವಾಳ 14.07 ಲಕ್ಷ ಕೋಟಿ ರೂಪಾಯಿಗಳಾಗಿದೆ.