ಕೊರೊನಾ ಕಾರಣಕ್ಕೆ ಲಾಕ್ಡೌನ್ ಜಾರಿಗೊಳಿಸಿದ್ದ ಪರಿಣಾಮ ಈ ಮೊದಲೇ ಕುಸಿತ ಕಂಡಿದ್ದ ಭಾರತದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಪಾತಾಳಕ್ಕೆ ಇಳಿದಿತ್ತು. ಇದರಿಂದಾಗಿ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು.
ಸಂಕಷ್ಟದಲ್ಲಿರುವ ಜನತೆಗೆ ನೆರವಾಗುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಹಲವಾರು ಕ್ರಮಗಳನ್ನು ಕೈಗೊಂಡಿತ್ತು. ಈಗಲೂ ಕೂಡ ಆರ್.ಬಿ.ಐ. ಭಾರತದ ಆರ್ಥಿಕತೆಯ ಪುನಶ್ಚೇತನಕ್ಕಾಗಿ ನಿರಂತರವಾಗಿ ಪ್ರಯತ್ನಿಸುತ್ತಿದೆ.
ಹೀಗಾಗಿಯೇ ಸಹಜವಾಗಿ ಎಲ್ಲರ ಚಿತ್ತ ಭಾರತೀಯ ರಿಸರ್ವ್ ಬ್ಯಾಂಕ್ ಕೈಗೊಳ್ಳುವ ತೀರ್ಮಾನಗಳತ್ತ ಇರುತ್ತದೆ. ಇದೀಗ ಆರ್.ಬಿ.ಐ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ 10 ಲಕ್ಷ ಹಿಂಬಾಲಕರನ್ನು ಹೊಂದುವ ಮೂಲಕ ಇಷ್ಟು ಸಂಖ್ಯೆಯ ಹಿಂಬಾಲಕರನ್ನು ಹೊಂದಿದ ವಿಶ್ವದ ಮೊದಲ ಕೇಂದ್ರೀಯ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.