alex Certify ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ‘ಬಂಪರ್’ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ‘ಬಂಪರ್’ ಸುದ್ದಿ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಕಚೇರಿಗಳು ಬಂದ್ ಆಗಿದ್ದು, ಉದ್ಯೋಗಸ್ಥರು ಮನೆಯಲ್ಲೇ ಕಾಲ ಕಳೆಯುವಂತಾಗಿತ್ತು. ಇದರ ಜೊತೆಗೆ ಹಲವರಿಗೆ ಉದ್ಯೋಗ ಕಳೆದುಕೊಳ್ಳುವ ಭಯ ಕಾಡಿದ್ದು, ಜೊತೆಗೆ ಮುಂದಿನ ದಿನಗಳಲ್ಲಿ ನಿರುದ್ಯೋಗ ಹೆಚ್ಚಲಿದೆ ಎಂಬ ಮಾತು ಕೇಳಿಬಂದಿತ್ತು.

ಆದರೆ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಲಾಕ್ಡೌನ್ ಸಂದರ್ಭದಲ್ಲೂ ಸಿಹಿ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಅಟಲ್ ಜಿ ಜನಸ್ನೇಹಿ ಕೇಂದ್ರಗಳಿಗೆ 1,121 ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

ಈ ಕುರಿತ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಹೊರಗುತ್ತಿಗೆ ಆಧಾರದ ನೇಮಕಾತಿ ಅಧಿಕಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. 14 ಜಿಲ್ಲೆಗಳ ನಾಡ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ.

ಈ ಮೊದಲು ರಾಜ್ಯದ ಎಲ್ಲ ನಾಡ ಕಚೇರಿಗಳಿಗೆ 1,916 ಡೇಟಾ ಎಂಟ್ರಿ ಆಪರೇಟರ್ ಗಳನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿತ್ತಾದರೂ ಇದೀಗ 1,121 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅಧಿಸೂಚನೆ ಪ್ರಕಟಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...