ಕೊರೊನಾ ಲಾಕ್ ಡೌನ್ ನಿಂದ ಬಹುತೇಕರು ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದಾರೆ. ಅಲ್ಲದೇ ಕೆಲವರು ಉದ್ಯೋಗ ಕಳೆದುಕೊಂಡಿದ್ದರೆ ಇನ್ನು ಉದ್ಯೋಗದ ನಿರೀಕ್ಷೆಯಲ್ಲಿದ್ದವರು ಸದ್ಯಕ್ಕೆ ಇದು ಸಾಧ್ಯವಿಲ್ಲವೆಂದು ನಿರಾಸೆಗೊಂಡಿದ್ದಾರೆ. ಅಂತವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ.
ಹೌದು, ಸಹಕಾರ ಇಲಾಖೆ ಮೂಲಕ 2021 ರ ಜೂನ್ ಒಳಗೆ ಸುಮಾರು 5 ಸಾವಿರ ಹುದ್ದೆಗಳನ್ನು ಸೃಷ್ಟಿಸಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ರಾಜ್ಯದಲ್ಲಿರುವ 40 ಸಾವಿರ ಸಹಕಾರ ಸಂಘಗಳ ಮೂಲಕ 5 ಸಾವಿರ ಉದ್ಯೋಗವನ್ನು ಜೂನ್ ಒಳಗೆ ಸೃಷ್ಟಿಸಲು ಸೂಚನೆ ನೀಡಿರುವುದಾಗಿ ಹೇಳಿದ ಸಚಿವರು, ಯಾವ ಯಾವ ವಿಭಾಗದಿಂದ ಯಾವ ಯಾವ ಹಾಗೂ ಎಷ್ಟು ಉದ್ಯೋಗವನ್ನು ನೀಡುತ್ತಿದ್ದೇವೆ ಎಂಬ ಮಾಹಿತಿಯನ್ನು ಹಂತ ಹಂತವಾಗಿ ನೀಡುತ್ತೇವೆ ಎಂದು ತಿಳಿಸಿದ್ದಾರೆ.