ಕೊರೊನಾ ಕಾರಣಕ್ಕೆ ಬಹಳಷ್ಟು ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನು ಉದ್ಯೋಗದ ನಿರೀಕ್ಷೆಯಲ್ಲಿದ್ದವರು ಸದ್ಯಕ್ಕೆ ತಮಗೆ ಅವಕಾಶ ಸಿಗುವುದಿಲ್ಲವೇನೋ ಎಂಬ ಆತಂಕಕ್ಕೆ ಒಳಗಾಗಿದ್ದರು. ಅಂತವರಿಗೆ ಭರ್ಜರಿ ಸಿಹಿ ಸುದ್ದಿಯೊಂದು ಇಲ್ಲಿದೆ.
ಹೌದು, ದಸರಾ ಹಾಗೂ ದೀಪಾವಳಿ ಸಂದರ್ಭದಲ್ಲಿ ದೊಡ್ಡ ಪ್ರಮಾಣದಲ್ಲಿ ವಹಿವಾಟು ನಡೆಯಬಹುದೆಂಬ ನಿರೀಕ್ಷೆ ಹೊಂದಿರುವ ಇ-ಕಾಮರ್ಸ್ ಕಂಪನಿಗಳಾದ ಫ್ಲಿಪ್ಕಾರ್ಟ್ ಹಾಗೂ ಅಮೆಜಾನ್ ಭಾರಿ ಸಂಖ್ಯೆಯಲ್ಲಿ ನೇಮಕಾತಿಗಳನ್ನು ಮಾಡಿಕೊಳ್ಳಲು ಮುಂದಾಗಿವೆ.
ಫ್ಲಿಪ್ಕಾರ್ಟ್ 70,000 ನೇರ ಹಾಗೂ ತಾತ್ಕಾಲಿಕ ಹುದ್ದೆಗಳನ್ನು ಸೃಷ್ಟಿಸುತ್ತಿದೆ ಎನ್ನಲಾಗಿದ್ದು, ಅಮೆಜಾನ್ ಕೂಡಾ ಇಷ್ಟೇ ಸಂಖ್ಯೆಯ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ನಿರೀಕ್ಷೆಯಿದೆ. ಈ ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ತಯಾರಿ ನಡೆದಿದೆ ಎನ್ನಲಾಗಿದೆ.