ಕೊರೊನಾ ಕಾಲದಲ್ಲಿ ಅನೇಕ ಜನರು ಉದ್ಯೋಗ ಇಲ್ಲದೇ ಪರದಾಡುತ್ತಿದ್ದಾರೆ. ಅಂತವರಿಗೆ ಇಲ್ಲೊಂದು ಖುಷಿ ಸುದ್ದಿಯಿದೆ. ಕೇಂದ್ರ ಸರ್ಕಾರ ಖಾಲಿ ಇರುವಂತಹ ಹುದ್ದೆಗಳನ್ನ ಭರ್ತಿ ಮಾಡೋದಕ್ಕೆ ಮುಂದಾಗಿದೆ.
ಕೊಚ್ಚಿನ್ ಶಿಪ್ಯಾರ್ಡ್ನ ವಿವಿಧ ಹುದ್ದೆಗಳಾದ ಶೀಟ್ ಮೆಟಲ್ ವರ್ಕರ್, ವೆಲ್ಡರ್ ಫಿಟ್ಟರ್, ಮೆಕ್ಯಾನಿಕ್ ಡೀಸೆಲ್, ಮೆಕ್ಯಾನಿಕ್ ಮೋಟಾರು ವಾಹನ, ಡಿಸೈನರ್, ಎಲೆಕ್ಟ್ರಿಶಿಯನ್ ಹಾಗೂ ಕ್ರೇನ್ ಆಪರೇಟರ್ ಸೇರಿದಂತೆ ಅನೇಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನ ಕೊರಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ವಿಭಾಗದ cochinshipyard.com ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 10.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಐಟಿಐ ಡಿಪ್ಲೊಮಾ ಸಂಬಂಧಿತ ಕೋರ್ಸ್ ಮುಗಿಸಿರಬೇಕು.
ಕೊಚ್ಚಿನ್ ಶಿಪ್‌ಯಾರ್ಡ್ ನೇಮಕಾತಿಗೆ 30 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಸಾಮಾನ್ಯ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು 300 ರೂಪಾಯಿ ಶುಲ್ಕ ಪಾವತಿಸಬೇಕು. ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳ ಅರ್ಜಿ ಶುಲ್ಕ 200 ರೂಪಾಯಿ. ಈ ಹುದ್ದೆಗಳಿಗೆ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ ಮತ್ತು ಪ್ರಾಯೋಗಿಕ ಆಧಾರದ ಮೇಲೆ ನಡೆಯಲಿದೆ. ಇದರಲ್ಲಿ 50 ಅಂಕ ಲಿಖಿತ ಪರೀಕ್ಷೆ ಮತ್ತು 50 ಅಂಕ ಪ್ರಾಯೋಗಿಕವಾಗಿರುತ್ತವೆ.