alex Certify ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್:‌ IOCL ನ 600 ಹುದ್ದೆಗಳಿಗಾಗಿ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್:‌ IOCL ನ 600 ಹುದ್ದೆಗಳಿಗಾಗಿ ನೇಮಕಾತಿ

ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಅಪ್ರೆಂಟಿಸ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 25 ಆಗಿತ್ತು.  ಈಗ ಅದನ್ನು ಜೂನ್ 21 ರವರೆಗೆ ವಿಸ್ತರಿಸಲಾಗಿದೆ. ಈ ಹುದ್ದೆಗಳಿಗೆ ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಈಗ ಇಂಡಿಯನ್ ಆಯಿಲ್‌ನ ಅಧಿಕೃತ ವೆಬ್‌ಸೈಟ್ iocl.in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಐಒಸಿಎಲ್ ಈಗ ಖಾಲಿ ಹುದ್ದೆಗಳ ಸಂಖ್ಯೆಯನ್ನು 500 ರಿಂದ 600 ಕ್ಕೆ ಹೆಚ್ಚಿಸಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು ಜಾಹೀರಾತು ಪೋಸ್ಟ್ ಗಳ ಸಂಖ್ಯೆ 500 ಆಗಿತ್ತು. ಈಗ ಈ ಹುದ್ದೆಗಳ ಸಂಖ್ಯೆಯನ್ನು 600 ಕ್ಕೆ ಏರಿಸಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು https://rectt.in/ApplyOnline.aspx.  ಅಲ್ಲದೆ, ಈ ಪೋಸ್ಟ್‌ಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಈ ಲಿಂಕ್ ಅನ್ನು ಕ್ಲಿಕ್ ಮಾಡುವುದರ ಮೂಲಕ ಅಧಿಕೃತ ಅಧಿಸೂಚನೆಯನ್ನು ನೋಡಬಹುದು  https://rectt.in/Notification/Advertisement.aspx. ಟ್ರೇಡ್ ಅಪ್ರೆಂಟಿಸ್ ಹೊರತುಪಡಿಸಿ ಉಳಿದ ಹುದ್ದೆಗಳ ಅಭ್ಯರ್ಥಿಗಳಿಗೆ 12 ತಿಂಗಳ ತರಬೇತಿ ಸಿಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...