ಉದ್ಯೋಗಿಗಳ ಗ್ರಾಚ್ಯುಟಿ ಕುರಿತಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. ಉದ್ಯೋಗಿಗಳಿಗೆ ಅನುಕೂಲವಾಗುವಂತೆ ಗ್ರಾಚ್ಯುಟಿ ನಿಯಮದಲ್ಲಿ ಬದಲಾವಣೆ ತರಲು ನಿರ್ಧರಿಸಲಾಗಿದೆ.
ಈವರೆಗೆ ಉದ್ಯೋಗಿ ಒಂದು ಕಂಪನಿಯಲ್ಲಿ ಕನಿಷ್ಠ ಐದು ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದ್ದರಷ್ಟೇ ಗ್ರಾಚ್ಯುಟಿ ಅನ್ವಯವಾಗುತ್ತಿತ್ತು. ಇದೀಗ ಉದ್ಯೋಗಿಗಳು 5 ವರ್ಷ ಕೆಲಸದಲ್ಲಿ ಇರದಿದ್ದರೂ ಗ್ರಾಚ್ಯುಟಿ ಅನ್ವಯವಾಗುವ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ ಈ ಅವಧಿಯನ್ನು ಒಂದು ಅಥವಾ ಮೂರು ವರ್ಷಗಳಿಗೆ ನಿಗದಿ ಪಡಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಪ್ರಸ್ತುತ ದಿನಗಳಲ್ಲಿ ಬಹಳಷ್ಟು ಉದ್ಯೋಗಿಗಳು ಒಂದೇ ಕಂಪನಿಯಲ್ಲಿ ಬಹುಕಾಲ ಕಾರ್ಯ ನಿರ್ವಹಿಸುವುದಿಲ್ಲ ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ನಿಯಮ ಜಾರಿಗೆ ಬಂದರೆ ಬಹಳಷ್ಟು ಉದ್ಯೋಗಿಗಳಿಗೆ ಅನುಕೂಲವಾಗಲಿದೆ.