ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕೊರೊನಾ ಸಂಕಷ್ಟದ ಸಮಯದಲ್ಲೂ ತನ್ನ ಹೂಡಿಕೆಯನ್ನು ಹೆಚ್ಚಿಸಿಕೊಳ್ಳುವ ಮೂಲಕ ಈಗ ಸಾಲ ಮುಕ್ತವಾಗಿದೆ.
ಈ ಎಲ್ಲ ಬೆಳವಣಿಗೆಗಳಿಂದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮಾರುಕಟ್ಟೆ ಮೌಲ್ಯ ಏರಿಕೆಯಾಗುತ್ತಿದ್ದು, ಸೋಮವಾರ ಒಂದೇ ದಿನ 40,508.8 ಕೋಟಿ ಹೆಚ್ಚಾಗಿದೆ.
ಇದರಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್ ನ ಒಟ್ಟಾರೆ ಮಾರುಕಟ್ಟೆ ಮೌಲ್ಯ 11.73 ಲಕ್ಷ ಕೋಟಿಗೆ ಏರಿಕೆಯಾಗಿದ್ದು, ಷೇರು ಮೌಲ್ಯ ಹೆಚ್ಚಳವಾದ ಕಾರಣ ಕಂಪನಿಯ ಮಾರುಕಟ್ಟೆ ಮೌಲ್ಯ ಗರಿಷ್ಠ ಮಟ್ಟಕ್ಕೆ ತಲುಪಿದೆ.