alex Certify ಕೊರೊನಾ ಎಫೆಕ್ಟ್: ಮನೆಯಲ್ಲೇ ಕುಳಿತು ಮಾಡುವ ಕೆಲಸಗಳತ್ತ ಒಲವು ತೋರುತ್ತಿದ್ದಾರೆ ಜನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೊನಾ ಎಫೆಕ್ಟ್: ಮನೆಯಲ್ಲೇ ಕುಳಿತು ಮಾಡುವ ಕೆಲಸಗಳತ್ತ ಒಲವು ತೋರುತ್ತಿದ್ದಾರೆ ಜನ

ಮಾರಣಾಂತಿಕ ಕೊರೊನಾ ಜನಜೀವನವನ್ನು ಹೈರಾಣಾಗಿಸಿದೆ. ದಿನೇ ದಿನೇ ಈ ಸೋಂಕು ವ್ಯಾಪಕವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ತೀವ್ರವಾಗಲಿದೆ ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಲಾಕ್ ಡೌನ್ ಸಡಿಲಿಕೆ ಮಾಡಿರುವುದೂ ಸೋಂಕು ವ್ಯಾಪಿಸಲು ಕಾರಣವಾಗಿದೆ.

ಯಾವುದೇ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿದ್ದರೆ ಆತನ ಸಂಪರ್ಕಕ್ಕೆ ಬಂದವರಿಗೂ ಇದು ವ್ಯಾಪಿಸುತ್ತದೆ. ಹೀಗಾಗಿಯೇ ಜನ ಭಯಭೀತರಾಗಿದ್ದು, ಆದರೆ ಕೆಲಸದ ಸ್ಥಳಗಳಲ್ಲಿ ಅನಿವಾರ್ಯವಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ.

ಸೋಂಕು ವ್ಯಾಪಿಸದಂತೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಸರ್ಕಾರಗಳು ಹೇಳುತ್ತಿದ್ದರೂ ಇದು ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ.

ಹೀಗಾಗಿ ಬಹುತೇಕರು ಮನೆಗಳಲ್ಲೇ ಕುಳಿತು ಕೆಲಸ ಮಾಡುವತ್ತ ಒಲವು ತೋರಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಅಂತರ್ಜಾಲದಲ್ಲಿ ಈ ಕುರಿತು ಹೆಚ್ಚಿನ ಹುಡುಕಾಟ ನಡೆದಿರುವುದು ಸಮೀಕ್ಷೆಯಿಂದ ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...