alex Certify ಖರೀದಿದಾರರಿಗೆ ಗುಡ್ ನ್ಯೂಸ್: ಇಂದು ಮತ್ತೆ ಇಳಿಕೆ ಕಂಡ ‘ಚಿನ್ನ’ದ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖರೀದಿದಾರರಿಗೆ ಗುಡ್ ನ್ಯೂಸ್: ಇಂದು ಮತ್ತೆ ಇಳಿಕೆ ಕಂಡ ‘ಚಿನ್ನ’ದ ಬೆಲೆ

ಇಂದು ಭಾರತೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಎಂಸಿಎಕ್ಸ್  ನಲ್ಲಿ ಅಕ್ಟೋಬರ್ ಚಿನ್ನದ ಭವಿಷ್ಯವು ಶೇಕಡಾ 0.22 ರಷ್ಟು ಇಳಿದಿದ್ದು, 10 ಗ್ರಾಂಗೆ ಬಂಗಾರದ ಬೆಲೆಯು 51,665 ಕ್ಕೆ ತಲುಪಿದೆ. ಬೆಳ್ಳಿ ಬೆಲೆಯು ಪ್ರತಿ ಕೆಜಿಗೆ ಶೇಕಡಾ 1 ರಷ್ಟು ಇಳಿಕೆ ಕಂಡಿದ್ದು ಕೆ.ಜಿಗೆ 66,821 ರೂಪಾಯಿಯಾಗಿದೆ.

ಗುರುವಾರ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 54,870 ರೂಪಾಯಿಗಳಿಂದ 54,380 ರೂಪಾಯಿಗೆ ಇಳಿದಿದೆ. ಬೆಳ್ಳಿ ಕೆ.ಜಿ.ಗೆ 65,500 ರೂಪಾಯಿಗಳಿಂದ 65,550 ರೂಪಾಯಿ ಏರಿಕೆ ಕಂಡಿದೆ. ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 49,850 ರೂಪಾಯಿಯಾಗಿದೆ.

ಜಾಗತಿಕ ಮಾರುಕಟ್ಟೆ ದುರ್ಬಲಗೊಂಡಿರುವುದು ಹಾಗೂ ರೂಪಾಯಿ ಮೌಲ್ಯದಲ್ಲಿ ಏರಿಕೆ ಬಂಗಾರದ ಬೆಲೆ ಇಳಿಕೆಗೆ ಕಾರಣವಾಗಿದೆ. ದೆಹಲಿ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ 210 ರೂಪಾಯಿ ಇಳಿಕೆ ಕಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ 1,918 ಡಾಲರ್ ಪ್ರತಿ ಔನ್ಸ್ ಆಗಿದೆ. ಬೆಳ್ಳಿ ಬೆಲೆ 26.45 ಡಾಲರ್ ಪ್ರತಿ ಔನ್ಸ್ ಆಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...