alex Certify ಖರೀದಿದಾರರ ಮೊಗದಲ್ಲಿ ಮಂದಹಾಸ ಮೂಡಿಸಿದ ‘ಚಿನ್ನ’ದ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖರೀದಿದಾರರ ಮೊಗದಲ್ಲಿ ಮಂದಹಾಸ ಮೂಡಿಸಿದ ‘ಚಿನ್ನ’ದ ಬೆಲೆ

ವಿವಾಹ ಸೇರಿದಂತೆ ಶುಭ ಸಮಾರಂಭಗಳು ಸಮೀಪಿಸುತ್ತಿರುವ ವೇಳೆ ಹಳದಿ ಲೋಹ ಚಿನ್ನದ ಬೆಲೆ ಗಗನಮುಖಿಯಾಗಿದ್ದ ಕಾರಣ ಖರೀದಿದಾರರು ಕಂಗಾಲಾಗಿದ್ದರು. ಇದರ ಮಧ್ಯೆ ಸೋಮವಾರದಂದು ಚಿನ್ನದ ಬೆಲೆ ಖರೀದಿದಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಹೌದು, ಸೋಮವಾರದಂದು ಚಿನ್ನದ ಬೆಲೆಯಲ್ಲಿ 326 ರೂಪಾಯಿಗಳಷ್ಟು ಇಳಿಕೆಯಾಗಿದ್ದು, 10 ಗ್ರಾಂ ಚಿನ್ನದ ಬೆಲೆ 52,423 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ 68,289 ರೂಪಾಯಿ ಮುಟ್ಟಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಗಳಿಗನುಗುಣವಾಗಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಏರಿಳಿತ ಕಾಣುತ್ತಿದ್ದು, ಸೋಮವಾರದಂದು ಡಾಲರ್ ಎದುರು ರೂಪಾಯಿ ಮೌಲ್ಯ 7 ಪೈಸೆಯಷ್ಟು ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...