alex Certify ಖಾಸಗಿ ಬಸ್ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಬಸ್ ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಸಡಿಲಿಕೆ ಮಾಡಿದ್ದು, ನಿಯಮ ಹಾಗು ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕೆಂಬ ಷರತ್ತಿನ ಮೇಲೆ ಖಾಸಗಿ ಬಸ್ ಸಂಚಾರ ಆರಂಭಕ್ಕೆ ಅನುಮತಿ ನೀಡಿದೆ.

ಒಂದು ಬಸ್ಸಿನಲ್ಲಿ ಕೇವಲ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಲು ಅವಕಾಶವಿದ್ದು, ಜೊತೆಗೆ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಬೇಕೆಂದು ಸೂಚಿಸಲಾಗಿದೆ.

ಆದರೆ ಇಷ್ಟು ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಕರೆದೊಯ್ದರೆ ತಾವು ನಷ್ಟ ಅನುಭವಿಸಬೇಕಾಗುತ್ತದೆ ಎಂಬುದು ಬಸ್ ಮಾಲೀಕರ ಅಳಲಾಗಿದೆ. ಹೀಗಾಗಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಸರಕಾರದ ಮುಂದೆ ಬೇಡಿಕೆ ಇಟ್ಟಿದ್ದಾರೆ.

ಇದೀಗ ರಾಜ್ಯ ಸರ್ಕಾರ ಬಸ್ ಮಾಲೀಕರ ಬೇಡಿಕೆಗೆ ಸ್ಪಂದಿಸಲು ಮುಂದಾಗಿದ್ದು, ತೆರಿಗೆ ವಿನಾಯಿತಿ ಕುರಿತಂತೆ ಇನ್ನೆರಡು ದಿನಗಳಲ್ಲಿ ಪೂರಕ ನಿರ್ಧಾರಕ್ಕೆ ಬರಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...