alex Certify ಗುಡ್ ನ್ಯೂಸ್: ಕೋವಿಡ್ ಸೆಸ್ ಕುರಿತ ವದಂತಿಗೆ ತೆರೆ ಎಳೆದ ಕೇಂದ್ರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಕೋವಿಡ್ ಸೆಸ್ ಕುರಿತ ವದಂತಿಗೆ ತೆರೆ ಎಳೆದ ಕೇಂದ್ರ ಸರ್ಕಾರ

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಈಗಾಗಲೇ ನಾಲ್ಕು ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಳೆದ ಎರಡು ತಿಂಗಳಿನಿಂದ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಇದರ ಜೊತೆಗೆ ಸರ್ಕಾರ, ಸಂಕಷ್ಟದಲ್ಲಿರುವವರ ನೆರವಿಗೆ ಪ್ಯಾಕೇಜ್ ಘೋಷಣೆ ಮಾಡಿದ್ದು, ಇದನ್ನು ನಿಭಾಯಿಸುವ ಸವಾಲು ಎದುರಾಗಿತ್ತು.

ಹೀಗಾಗಿ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಜಿ.ಎಸ್.ಟಿ. ಗೆ ಕೋವಿಡ್ ಸೆಸ್ ಸೇರ್ಪಡೆ ಮಾಡಲಿದೆ ಎಂಬ ವದಂತಿ ಕಳೆದ ಕೆಲವು ದಿನಗಳಿಂದ ಹರಡಿತ್ತು. ಈ ವದಂತಿಗಳಿಗೆ ಸರ್ಕಾರ ಈಗ ತೆರೆ ಎಳೆದಿದ್ದು, ಅಂತಹ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದೆ. ಹೀಗಾಗಿ ಈಗಾಗಲೇ ಸಂಕಷ್ಟದಲ್ಲಿರುವ ನಮ್ಮ ಮೇಲೆ ಮತ್ತಷ್ಟು ಹೆಚ್ಚುವರಿ ಹೊರೆ ಬೀಳಲಿದೆ ಎಂಬ ಆತಂಕದಲ್ಲಿದ್ದರು ಈಗ ನಿರಾಳರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...