ದೈನಂದಿನ ಬಳಕೆಯ ಈರುಳ್ಳಿ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗೃಹಿಣಿಯರಿಗೆ ಗುಡ್ ನ್ಯೂಸ್ ಇಲ್ಲಿದೆ. ಎಲ್ಲ ವಿಧದ ಈರುಳ್ಳಿ ರಫ್ತನ್ನು ಕೇಂದ್ರ ಸರ್ಕಾರ ನಿಷೇಧಿಸಿರುವ ಕಾರಣ ಬೆಲೆಯಲ್ಲಿ ಇಳಿಕೆಯಾಗುವ ನಿರೀಕ್ಷೆ ಇದೆ.
ಸೋಮವಾರದಿಂದಲೇ ಈ ನಿಷೇಧ ಜಾರಿಗೆ ಬಂದಿದ್ದು, ಕತ್ತರಿಸಿದ ಮತ್ತು ಪುಡಿಯ ರೂಪದಲ್ಲಿರುವ ಈರುಳ್ಳಿಯನ್ನು ಹೊರತುಪಡಿಸಿ ಉಳಿದ ಎಲ್ಲ ಬಗೆಯ ಈರುಳ್ಳಿ ರಫ್ತಿನ ಮೇಲೆ ನಿಷೇಧ ಅನ್ವಯವಾಗಲಿದೆ.
ದೇಶಿಯ ಮಾರುಕಟ್ಟೆಯಲ್ಲಿ ಈರುಳ್ಳಿ ಕೊರತೆ ಉಂಟಾಗಿರುವುದು ಹಾಗೂ ಬೆಲೆ ಏರಿಕೆಯಾಗಿರುವುದರ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.