ಕೊರೊನಾ ಸಂದರ್ಭದಲ್ಲಿ ಇದರ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಹೀಗಾಗಿ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು.
ಇದನ್ನು ಮನಗಂಡಿದ್ದ ಸರ್ಕಾರ ಇಎಂಐ ಪಾವತಿಯನ್ನು ಮುಂದೂಡಿಕೆ ಮಾಡಿದ್ದು, ಇದನ್ನು ಮತ್ತಷ್ಟು ಕಾಲ ವಿಸ್ತರಿಸುವಂತೆ ಒತ್ತಾಯಿಸಲಾಗುತ್ತಿದೆ. ಅಲ್ಲದೆ ಮುಂದೂಡಿಕೆಯಾಗಿದ್ದ ಇಎಂಐ ಮೇಲೆ ಬಡ್ಡಿ ವಿಧಿಸುವುದನ್ನು ಕೈಬಿಡುವಂತೆ ಆಗ್ರಹಿಸಲಾಗಿತ್ತು.
ಇದರ ಮಧ್ಯೆ ಗೃಹ ಸಾಲ ಪಡೆದವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. 30 ಲಕ್ಷ ರೂ. ಗಿಂತ ಹೆಚ್ಚಿನ ಗೃಹ ಸಾಲ ಪಡೆದವರ ಸಾಲದ ಮೇಲಿನ ಬಡ್ಡಿ ದರ ಇಳಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ರಿಸರ್ವ್ ಬ್ಯಾಂಕ್ ಕೈಗೊಂಡ ನಿರ್ಧಾರದ ಕಾರಣಕ್ಕೆ ಬಡ್ಡಿದರ ಇಳಿಕೆಯಾಗಲಿದೆ ಎನ್ನಲಾಗಿದೆ.