ಬ್ಯಾಂಕಿಂಗ್ ಸೇವೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇನ್ನು ಮುಂದೆ ಮನೆಬಾಗಿಲಲ್ಲೇ ಹಲವು ಬ್ಯಾಂಕಿಂಗ್ ಸೇವೆಗಳು ಗ್ರಾಹಕರಿಗೆ ಲಭ್ಯವಾಗಲಿದೆ.
ಹೌದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಸೇವೆಗೆ ಚಾಲನೆ ನೀಡಿದ್ದು, ಆರಂಭಿಕ ಹಂತದಲ್ಲಿ ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಈ ಸೇವೆ ಲಭ್ಯವಾಗಲಿದೆ.
‘ಮನೆ ಬಾಗಿಲಲ್ಲೇ ಬ್ಯಾಂಕಿಂಗ್ ಸೇವೆ’ ಲಭ್ಯವಾಗುವುದರಿಂದ ಕೊರೊನ ಸಂಕಷ್ಟದ ಸಂದರ್ಭದಲ್ಲಿ ಬ್ಯಾಂಕಿಗೆ ಹೋಗುವ ಸಮಸ್ಯೆ ತಪ್ಪಲಿದೆ. ಯೋಜನೆಯಡಿ ಚೆಕ್ /ಡಿಮ್ಯಾಂಡ್ ಡ್ರಾಫ್ಟ್ / ಪೇ ಆರ್ಡರ್ ಹೊಸ ಪಾಸ್ ಬುಕ್, ಚೆಕ್ ಬುಕ್ ಗೆ ಮನವಿ ಸಲ್ಲಿಸುವುದು, ಸ್ಟೇಟ್ಮೆಂಟ್ ಸೇರಿದಂತೆ ಹಲವು ಸೇವೆಗಳು ಲಭ್ಯವಾಗಲಿವೆ.