ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇದೀಗ ಲಾಕ್ ಡೌನ್ ನಲ್ಲಿ ಬಹಳಷ್ಟು ಸಡಿಲಿಕೆ ಮಾಡಿದ್ದು, ಆರ್ಥಿಕ ಚಟುವಟಿಕೆ ಆರಂಭವಾಗಿದೆ.
ಇದರ ಮಧ್ಯೆ ಲಾಕ್ ಡೌನ್ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಜೂನ್ 14ರಂದು ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ) ಸಭೆ ನಡೆಯಲಿದ್ದು, ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.
ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುವ ಸಲುವಾಗಿ ಕೆಲವೊಂದು ವಸ್ತುಗಳ ಮೇಲಿನ ಜಿ.ಎಸ್.ಟಿ. ಹೆಚ್ಚಳ ಮಾಡಬೇಕೆಂಬ ಮಾತು ಕೇಳಿಬರುತ್ತಿದೆಯಾದರೂ ಕೇಂದ್ರ ಸರ್ಕಾರ, ಸಾರ್ವಜನಿಕರಿಗೆ ಹೊರೆಯಾಗುವ ಯಾವುದೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿಲ್ಲ ಎನ್ನಲಾಗಿದೆ.