alex Certify ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ: ಪಂಚರಾಜ್ಯಗಳ ಚುನಾವಣೆ ಬಳಿಕ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್ ಸುದ್ದಿ: ಪಂಚರಾಜ್ಯಗಳ ಚುನಾವಣೆ ಬಳಿಕ ಪೆಟ್ರೋಲ್ – ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ

ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್ – ಡೀಸೆಲ್ ಬೆಲೆ ಕಳೆದ 20 ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ಭಾರತದ ತೈಲ ಕಂಪನಿಗಳು ಪ್ರತಿದಿನವೂ ಪೆಟ್ರೋಲ್ – ಡೀಸೆಲ್ ಬೆಲೆ ನಿಗದಿಪಡಿಸುತ್ತಿದ್ದು, ಆದರೆ ಕಳೆದ ಎರಡು ವಾರಗಳಿಂದ ಈ ಕಾರ್ಯಕ್ಕೆ ಮುಂದಾಗಿಲ್ಲ.

ಹಾಗೆಂದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿದೆ ಎಂದು ಭಾವಿಸಬೇಡಿ. ಸದ್ಯದಲ್ಲೇ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಭಾರತದ ತೈಲ ಕಂಪನಿಗಳು ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆ ಮಾಡುವ ಗೋಜಿಗೆ ಹೋಗಿಲ್ಲ. ಹೀಗಾಗಿ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿರುವ ಕಾರಣ ಭಾರತದ ತೈಲ ಕಂಪನಿಗಳಿಗೆ ಪೆಟ್ರೋಲ್ ಮಾರಾಟದಿಂದ 4 ರೂ. ಹಾಗೂ ಡೀಸೆಲ್ ಮಾರಾಟದಿಂದ 2 ರೂ. ನಷ್ಟವಾಗುತ್ತಿದೆ ಎನ್ನಲಾಗಿದೆ.

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಇಂಜಿನಿಯರಿಂಗ್ ಪ್ರವೇಶಕ್ಕೆ ಜೂನ್ 20 ರಿಂದ ಕಾಮೆಡ್-ಕೆ ಪರೀಕ್ಷೆ

ಒಂದೊಮ್ಮೆ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಾದರೆ ಇದು ಫಲಿತಾಂಶದ ಮೇಲೆ ಪರಿಣಾಮ ಬೀರಬಹುದು ಎಂಬ ಕಾರಣಕ್ಕೆ ಬೆಲೆ ಏರಿಕೆ ಮಾಡದಂತೆ ಭಾರತದ ತೈಲ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎನ್ನಲಾಗಿದ್ದು, ಚುನಾವಣೆ ಮುಗಿದ ಬಳಿಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...