alex Certify ಜಿಯೋ ಗ್ರಾಹಕರಿಗೆ ಮತ್ತೊಂದು ಖುಷಿ ಸುದ್ದಿ ನೀಡಿದ ಕಂಪನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಿಯೋ ಗ್ರಾಹಕರಿಗೆ ಮತ್ತೊಂದು ಖುಷಿ ಸುದ್ದಿ ನೀಡಿದ ಕಂಪನಿ

ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ವಿಶ್ವದಾದ್ಯಂತದ ಲಾಕ್‌ಡೌನ್ ಜಾರಿಯಲ್ಲಿದೆ.

ಈ ಸಂದರ್ಭದಲ್ಲಿ ವೀಡಿಯೊ ಕಾನ್ಫರೆನ್ಸಿಂಗ್ ಸೇವೆಗೆ ಉತ್ತೇಜನ ಸಿಕ್ಕಿದೆ. ಈಗ ರಿಲಯನ್ಸ್ ಜಿಯೋ ಕೂಡ ಈ ಕ್ಷೇತ್ರ ಪ್ರವೇಶಿಸಲು ತಯಾರಿ ನಡೆಸುತ್ತಿದೆ.

ವಿಡಿಯೋ ಕಾನ್ಫರೆನ್ಸಿಂಗ್ ಆ್ಯಪ್ ಬಿಡುಗಡೆ ಮಾಡಲು ಕಂಪನಿ ತಯಾರಿ ನಡೆಸುತ್ತಿದೆ ಎಂದು ರಿಲಯನ್ಸ್ ಜಿಯೋ ತಿಳಿಸಿದೆ. ಈ ಅಪ್ಲಿಕೇಶನ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ.  ಈ ಅಪ್ಲಿಕೇಶನ್ ಗೆ ಜಿಯೋ ಮೀಟ್ ಎಂದು ಕರೆಯಲಾಗುತ್ತದೆ. ಇದನ್ನು ರಿಲಯನ್ಸ್ ಇಂಡಸ್ಟ್ರೀಸ್ ಸಹಯೋಗದೊಂದಿಗೆ ಸಿದ್ಧಪಡಿಸಲಾಗ್ತಿದೆ.

ಫೇಸ್‌ಬುಕ್, ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳು ತಮ್ಮ ವೀಡಿಯೊ ಕರೆ ಮಾಡುವ ಪ್ಲ್ಯಾಟ್‌ಫಾರ್ಮ್‌ಗಳನ್ನು ದೃಢವಾಗಿ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡುತ್ತಿವೆ. ಲಾಕ್‌ಡೌನ್‌ನಿಂದ ಜೂಮ್ ಕೋಟಿಗಟ್ಟಲೆ ಬಳಕೆದಾರರನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಜೂಮ್‌ನೊಂದಿಗೆ ಸ್ಪರ್ಧಿಸಲು ಈ ಕಂಪನಿಗಳು ಸಾಕಷ್ಟು ಪ್ರಯತ್ನ ನಡೆಸುತ್ತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...