ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಒಂದೇ ದಿನ 515 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ.
ಇದರ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಲ್ಲಿದ್ದ ವೇಳೆ ರೈತಾಪಿ ವರ್ಗ ತಾನು ಬೆಳೆದ ಬೆಳೆಯನ್ನು ಮಾರಾಟ ಮಾಡಲಾಗದೆ ಸಂಕಷ್ಟಕ್ಕೆ ಸಿಲುಕಿತ್ತು. ಇದೀಗ ಮುಂಗಾರು ಮಳೆ ಆರಂಭವಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಇದರ ಮಧ್ಯೆ ರಾಜ್ಯದ ವಿವಿಧ ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿ ಅವಧಿ ಮುಗಿದಿದ್ದು, ಚುನಾವಣೆ ನಡೆಸಬೇಕಾಗಿತ್ತು. ಆದರೆ ಈ ಸಂದರ್ಭದಲ್ಲಿ ಚುನಾವಣೆ ನಡೆಸಿದರೆ ಸಾಲ ವಿತರಣೆಗೆ, ಕೃಷಿ ಚಟುವಟಿಕೆಗೆ ಅಡ್ಡಿಯಾಗಲಿದೆ. ಅಲ್ಲದೆ ರೈತರು ಸಕ್ರಿಯವಾಗಿ ಭಾಗಿಯಾಗಲು ಸಾಧ್ಯವಾಗದ ಕಾರಣಕ್ಕೆ ಚುನಾವಣೆಯನ್ನು ಆರು ತಿಂಗಳುಗಳ ಕಾಲ ಮುಂದೂಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.