alex Certify ನಿರುದ್ಯೋಗಿ ಮಹಿಳೆಯರಿಗೊಂದು ಮಹತ್ವದ ಸುದ್ದಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಮಹಿಳೆಯರಿಗೊಂದು ಮಹತ್ವದ ಸುದ್ದಿ…!

ಕೊರೊನಾ ಮಹಾಮಾರಿ ಜೀವ, ಜೀವನವನ್ನು ಕಿತ್ತುಕೊಳ್ಳುತ್ತಿದೆ. ಅದೆಷ್ಟೋ ಜನ ಕೆಲಸವಿಲ್ಲದೆ ಬೀದಿಗೆ ಬಿದ್ದಿದ್ದಾರೆ. ಇರುವ ಕೆಲಸವನ್ನೂ ಬಿಟ್ಟು ಮನೆಯಲ್ಲಿ ಕೈಕಟ್ಟಿ ಕುಳಿತುಕೊಳ್ಳುವ ಸ್ಥಿತಿ ಬಂದೊದಗಿದೆ. ಕೊರೊನಾದಿಂದಾಗಿ ಅನೇಕರು ಬೀದಿಗೆ ಬಿದ್ದ ಪರಿಣಾಮ ಸರ್ಕಾರ ಅನೇಕ ಯೋಜನೆಗಳನ್ನು ಜನರಿಗಾಗಿ ನೀಡಿದೆ. ಇದೀಗ ನಿರುದ್ಯೋಗ ಮಹಿಳೆಯರಿಗೂ ಸಹಾಯ ಮಾಡುತ್ತಿದೆ.

ಹೌದು, ಉದ್ಯೋಗಿನಿ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಜಿ ಆಹ್ವಾನ ನೀಡಲಾಗಿದೆ. 18 ವರ್ಷದಿಂದ 55 ವರ್ಷದೊಳಗೆ ವಯೋಮಿತಿ ಮಹಿಳೆಯರು ಸಹಾಯಧನಕ್ಕಾಗಿ ಅರ್ಜಿ ಹಾಕಬಹುದು.

ಸ್ವ ಉದ್ಯೋಗಕ್ಕಾಗಿ ಸುಮಾರು 3 ಲಕ್ಷದ ವರೆಗೆ ಬ್ಯಾಂಕ್ ಸಾಲ ನೀಡಲಾಗುತ್ತದೆ. ನಿನ್ನೆಯಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 23ರವರೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಈ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಛೇರಿಯನ್ನು ಸಂಪರ್ಕ ಮಾಡಬಹುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...