ಪೆಟ್ರೋಲ್ – ಡೀಸೆಲ್ ಬೆಲೆ ಈಗ ಮುಗಿಲು ಮುಟ್ಟಿದ್ದು ಶ್ರೀಸಾಮಾನ್ಯರು ಹೈರಾಣಾಗಿ ಹೋಗಿದ್ದಾರೆ. ಈ ತೈಲ ಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದ್ದು, ಹೀಗಾಗಿ ಜೀವನ ನಡೆಸುವುದೇ ದುಸ್ತರವಾಗಿದೆ. ಇದರ ಮಧ್ಯೆ ಬೆಲೆ ಏರಿಕೆಯಿಂದ ಕಂಗೆಟ್ಟವರಿಗೆ ನೆಮ್ಮದಿ ನೀಡುವಂತಹ ಸುದ್ದಿಯೊಂದು ಹೊರಬಿದ್ದಿದೆ.
ಹೌದು, ಕೇಂದ್ರ ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತರುವುದು ಒಳ್ಳೆಯದು. ಈ ನಿಟ್ಟಿನಲ್ಲಿ ಜಿ.ಎಸ್.ಟಿ. ಮಂಡಳಿ ಸೂಕ್ತ ತೀರ್ಮಾನ ಕೈಗೊಳ್ಳುವುದು ಒಳಿತು ಎಂದು ಹೇಳಿದ್ದಾರೆ.
ಸಿಹಿ ಸುದ್ದಿ: ಆಧಾರ್, ಡಿಎಲ್ ಸೇರಿ ಗುರುತಿನ ಚೀಟಿ ತೋರಿಸಿ ಉಚಿತ ಕೊರೊನಾ ಲಸಿಕೆ ಪಡೆಯಿರಿ
ಈ ಹಿಂದೆ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ತೈಲ ಬೆಲೆಯನ್ನು ಜಿ.ಎಸ್.ಟಿ. ವ್ಯಾಪ್ತಿಗೆ ತರುವ ಕುರಿತಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಒತ್ತಾಯಿಸಿದ್ದು, ಶೀಘ್ರದಲ್ಲೇ ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬಹುದು ಎಂದು ಹೇಳಲಾಗುತ್ತಿದೆ.