ಸ್ವಂತ ಸೂರು ಹೊಂದಬೇಕೆಂಬ ಕನಸು ಬಹುತೇಕ ಎಲ್ಲರಿಗೂ ಇರುತ್ತದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮನೆ ಹೊಂದುವುದು ಎಲ್ಲರ ಬಯಕೆಯಾಗಿರುತ್ತದೆ. ಹೀಗೆ ಬೆಂಗಳೂರಿನಲ್ಲಿ ಮನೆ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ.
ಕಚ್ಚಾ ಸಾಮಗ್ರಿಗಳ ಬೆಲೆ ಗರಿಷ್ಠ ಮಟ್ಟದಲ್ಲಿ ಇರುವುದರಿಂದ ಬೆಂಗಳೂರಿನಲ್ಲಿ ಮನೆಗಳ ದರವು ಚದರಡಿಗೆ ಶೇಕಡಾ 2 ರಷ್ಟು ಹೆಚ್ಚಳವಾಗಿದೆ ಎಂದು ಹೇಳಲಾಗಿದೆ. ಚದರಡಿಗೆ 4,975 ರೂಪಾಯಿಗಳಿದ್ದ ದರ ಈಗ 5,060 ರೂಪಾಯಿಗೆ ತಲುಪಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಏರಿಕೆಯಾಗಲಿದೆ ಎಂದು ಆಸ್ತಿ ಸಲಹಾ ಸಂಸ್ಥೆ ಅನರಾಕ್ ಹೇಳಿದೆ.
ಗ್ರಾಹಕರು, ಬ್ಯಾಂಕ್ ಗಳಿಗೂ ಗುಡ್ ನ್ಯೂಸ್: ನೆಟ್ ಬ್ಯಾಂಕಿಂಗ್ ಆಟೋ ಪೇಮೆಂಟ್ ನಿಯಮ ಮುಂದೂಡಿಕೆ
ಇನ್ನುಳಿದಂತೆ ದೇಶದ 7 ಪ್ರಮುಖ ನಗರಗಳಲ್ಲೂ ಮನೆಗಳ ದರದಲ್ಲಿ ಏರಿಕೆ ಆಗಲಿದೆ ಎಂದು ಅನರಾಕ್ ತಿಳಿಸಿದ್ದು, ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆಯೇ ಇದಕ್ಕೆ ಕಾರಣ ಎಂದು ಹೇಳಿದೆ.