alex Certify ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ – ಚಿನ್ನದ ಬೆಲೆಯಲ್ಲೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ – ಚಿನ್ನದ ಬೆಲೆಯಲ್ಲೂ ಇಳಿಕೆ

ಕಳೆದ ಕೆಲವು ದಿನಗಳಿಂದ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ ಆಗುವ ಮೂಲಕ ಖರೀದಿದಾರರಲ್ಲಿ ಆತಂಕ ಮೂಡಿಸಿತ್ತು, ಆದರೆ ಮಂಗಳವಾರ ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ ಕಂಡಿದ್ದು, ಚಿನ್ನದ ಬೆಲೆಯಲ್ಲೂ ಇಳಿಕೆಯಾಗಿದೆ.

ಬೆಳ್ಳಿ ಬೆಲೆಯಲ್ಲಿ ಪ್ರತಿ ಕೆಜಿಗೆ 5,781 ರೂಪಾಯಿ ಇಳಿಕೆಯಾಗುವ ಮೂಲಕ ಕೆಜಿಗೆ 61,606 ರೂಪಾಯಿ ತಲುಪಿದೆ. ಇನ್ನು ಚಿನ್ನದ ಬೆಲೆಯಲ್ಲಿ 672 ರೂಪಾಯಿ ಇಳಿಕೆಯಾಗುವ ಮೂಲಕ 10 ಗ್ರಾಂ ಚಿನ್ನಕ್ಕೆ 51,328 ರೂಪಾಯಿ ತಲುಪಿದೆ.

ಚಿನ್ನ ಹಾಗೂ ಬೆಳ್ಳಿ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ನಿಗದಿಯಾಗುತ್ತಿದ್ದು, ಜೊತೆಗೆ ಡಾಲರ್ ಎದುರು ರೂಪಾಯಿ ಮೌಲ್ಯ ಕೂಡ ಕಾರಣವಾಗುತ್ತದೆ. ಈ ಕಾರಣಕ್ಕಾಗಿ ಚಿನ್ನ – ಬೆಳ್ಳಿ ಬೆಲೆಯಲ್ಲಿ ಏರಿಳಿತವಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...