alex Certify ಬಿಗ್ ಬ್ರೇಕಿಂಗ್ ನ್ಯೂಸ್: ಸರ್ಕಾರ ರದ್ದು ಮಾಡಿದೆ 3 ಕೋಟಿ ರೇಷನ್ ಕಾರ್ಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ಬ್ರೇಕಿಂಗ್ ನ್ಯೂಸ್: ಸರ್ಕಾರ ರದ್ದು ಮಾಡಿದೆ 3 ಕೋಟಿ ರೇಷನ್ ಕಾರ್ಡ್

बड़ी खबर : सरकार ने इस वजह से रद्द किए 3 करोड़ राशन कार्ड, कहीं आपका तो नहीं हुआ

ಕೇಂದ್ರ ಸರ್ಕಾರ ಮಹತ್ವದ ಸೂಚನೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರ 3 ಕೋಟಿ ಪಡಿತರ ಚೀಟಿಗಳನ್ನು ರದ್ದು ಮಾಡಿದೆ. ಈ ಬಗ್ಗೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಮಾಹಿತಿ ನೀಡಿದ್ದಾರೆ.

ಲಾಕ್ ಡೌನ್ ಅವಧಿಯಲ್ಲಿ ಬಡವರಿಗೆ ಪ್ರಧಾನ್ ಮಂತ್ರಿ ಗರಿಬ್ ಯೋಜನೆ ಅಡಿಯಲ್ಲಿ ಜೂನ್ ವರೆಗೆ ಮೂರು ತಿಂಗಳ ಕಾಲ ಉಚಿತವಾಗಿ ಪಡಿತರ ವಿತರಣೆ ಮಾಡುವ ಘೋಷಣೆಯನ್ನು ಸರ್ಕಾರ ಈಗಾಗಲೇ ಮಾಡಿದೆ.

ಸರ್ಕಾರ ಹೊರಡಿಸಿದ ಹೇಳಿಕೆಯ ಪ್ರಕಾರ, ಆಧಾರ್ ಮತ್ತು ಪಡಿತರ ಚೀಟಿ ಲಿಂಕ್ ಮಾಡುವುದು ಅಗತ್ಯವಾಗಿದೆ. ಆಧಾರ್ ಲಿಂಕ್ ಆಗದ  ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ. ಇದಲ್ಲದೆ ನಕಲಿ ಪಡಿತರ ಚೀಟಿಗಳನ್ನು ತಯಾರಿಸುವ ಮೂಲಕ, ಆಹಾರ ಮತ್ತು ಇತರ ವಸ್ತುಗಳನ್ನು ಉಚಿತವಾಗಿ ತೆಗೆದುಕೊಳ್ಳುತ್ತಿರುವುದು ಪತ್ತೆಯಾಗಿದೆ. ಅಂತಹ ನಕಲಿ ಪಡಿತರ ಚೀಟಿಯನ್ನು ರದ್ದು ಮಾಡಲಾಗಿದೆ.

ದೇಶದಲ್ಲಿ ಒಟ್ಟು 80 ಕೋಟಿ ಜನರು ಪಡಿತರ ಚೀಟಿ ಹೊಂದಿದ್ದಾರೆ. ನಿಮ್ಮ ಪಡಿತರ ಚೀಟಿ ರದ್ದಾಗಿದ್ದರೆ ಆಹಾರ ಸರಬರಾಜು ಇಲಾಖೆಗೆ ಹೋಗಬೇಕಾಗುತ್ತದೆ. ಅಲ್ಲಿ ಆಧಾರ್ ಹಾಗೂ ಪಡಿತರ ಚೀಟಿ ತೋರಿಸಿ ಆಧಾರ್ ಲಿಂಕ್ ಮಾಡಿಸಿದ್ರೆ ನಿಮಗೆ ಪಡಿತರ ಸಿಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...