alex Certify ಮಹತ್ವದ ಯೋಜನೆಗಳನ್ನು ಮುಂದುವರೆಸಿದ ಮೋದಿ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹತ್ವದ ಯೋಜನೆಗಳನ್ನು ಮುಂದುವರೆಸಿದ ಮೋದಿ ಸರ್ಕಾರ

ಕೊರೊನಾ ವೈರಸ್ ದೇಶದ ಜನತೆಯನ್ನು ನಲುಗಿಸಿದೆ. ಎಲ್ಲಾ ವಲಯಗಳಿಗೂ ಕೊರೊನಾ ಎಫೆಕ್ಟ್ ತಟ್ಟಿದೆ. ಅನೇಕ ಉದ್ಯಮಗಳು ನೆಲಕಚ್ಚಿ ಹೋಗಿವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಬಡವರ ಪರ ನಿಂತಿದ್ದು, ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮತ್ತಷ್ಟು ಯೋಜನೆಗಳನ್ನು ಜನರಿಗೆ ನೀಡುತ್ತಿದೆ.

ಹೌದು, ನಿನ್ನೆ ಮಹತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಅನೇಕ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಗರೀಬ್ ಕಲ್ಯಾಣ ಯೋಜನೆಗೆ ಅನುಮೋದನೆ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬಡವರ ಅನುಕೂಲಕ್ಕಾಗಿ ಈ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಈಗಾಗಲೇ ಗರೀಬ್ ಕಲ್ಯಾಣ್ ಅನ್ನ ಯೋಜನೆ ನವೆಂಬರ್ ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಇದರ ಜೊತೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು 1.60 ಲಕ್ಷ ರೆಡಿ-ಟು-ಲೈವ್ ಮನೆಗಳನ್ನು ವಲಸೆ ಕಾರ್ಮಿಕರಿಗೆ 100 ಕ್ಕೂ ಹೆಚ್ಚು ನಗರಗಳಲ್ಲಿ ಕಡಿಮೆ ಹಣದಲ್ಲಿ ಬಾಡಿಗೆಗೆ ನೀಡಲು ನಿರ್ಧಾರ ಮಾಡಲಾಗಿದೆ. ಸುಮಾರು 3.5 ಲಕ್ಷ ಜನರಿಗೆ ಅಗ್ಗದ ಬಾಡಿಗೆಗೆ ಮನೆಗಳು ಸಿಗಲಿವೆ.

ಇನ್ನು ನೈಸರ್ಗಿಕ ಅನಿಲ ಸಚಿವಾಲಯ ಉಜ್ವಲ ಫಲಾನುಭವಿಗಳಿಗೆ ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಸಮಯ ಮಿತಿಯನ್ನು ಮೂರು ತಿಂಗಳು ವಿಸ್ತರಿಸುವ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...